ದೊಡ್ಡಬಳ್ಳಾಪುರ, (ಡಿ.15): ಹಾವೇರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಕನ್ನಡ ಜ್ಯೋತಿಯನ್ನು ಹೊತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಕನ್ನಡ ರಥಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಗಡಿ ಗ್ರಾಮವಾದ ಮಾರಸಂದ್ರದಲ್ಲಿ ಬೀಳ್ಕೂಡುಗೆ ನೀಡಲಾಯಿತು.

ದೊಡ್ಡಬಳ್ಳಾಪುರ ನಗರದಿಂದ ಹೊರಟ ರಥಕ್ಕೆ ಬಾಶೆಟ್ಟಿಹಳ್ಳಿಯಲ್ಲಿ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಅದ್ದೂರಿ ಪೂರ್ಣ ಕುಂಭ ಸ್ವಾಗತ ಕೋರಿ, ಬೀಳ್ಕೊಟ್ಟರು.

ರಸ್ತೆಯ ಬದಿಯಲ್ಲಿ ನಿಂತಿದ್ದ ಶಾಲಾ ಮಕ್ಕಳು ಭುವನೇಶ್ವರಿ ತಾಯಿಗೆ ಹೂವಿನ ಮಳೆಗೆರೆದರು.
ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಈ ವೇಳೆ ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
