ದೊಡ್ಡಬಳ್ಳಾಪುರ, (ಡಿ.12): ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿ ಚಿರತೆ ಆತಂಕ ದೂರಾಗುವ ಮುನ್ನವೇ, ತಾಲೂಕಿನ ಕೊನಘಟ್ಟ ಗ್ರಾಮದ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿ ರೈತರಲ್ಲಿ ಆತಂಕ ಸೃಷ್ಟಿಸಿದೆ.

ಕೊನಘಟ್ಟ ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಗುರುವಾರ ಬೆಳಗ್ಗೆ ಚಿರತೆ ಹೆಜ್ಜೆ ಗುರುತು ಕಂಡುಬಂದ ಹಿನ್ನೆಲೆ, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಚಿರತೆ ನಡೆದಾಡಿರುವುದು ಖಚಿತವಾಗಿದ್ದು, ಚಿರತೆ ಹಲವು ಕಿಮೀ ನಡೆಯುವುದರಿಂದ ಮತ್ತೆ ಏನಾದರೂ ಕಂಡು ಬಂದಲ್ಲಿ ಬೋನ್ ಅಳವಡಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಗ್ರಾಮಪಂಚಾಯಿತಿ ಸದಸ್ಯ ಆರಾಧ್ಯ, ಚಿರತೆ ಓಡಾಡಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದು, ಗ್ರಾಮಸ್ಥರು ಮುನ್ನೆಚ್ಚರಿಕೆ ವಹಿಸಬೇಕಿದೆ. ಸಂಜೆಯ ವೇಳೆ ಒಂಟಿಯಾಗಿ ಓಡಾಡುವುದನ್ನು ಕೆಲ ದಿನಗಳ ಕಾಲ ನಿಲ್ಲಿಸಬೇಕಿದ್ದು, ಅನಿವಾರ್ಯವಿದ್ದರೆ ಜೊತೆಯಲ್ಲಿ ಮತ್ತೊಬ್ಬರನ್ನು ಕರೆದೊಯ್ಯುವಂತೆ ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
