ದೊಡ್ಡಬಳ್ಳಾಪುರ, (ಡಿ.16): ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ, ನಗರದಲ್ಲಿಂದು ಜೆಡಿಎಸ್ ಪಕ್ಷದ ವತಿಯಿಂದ ಪೌರಕಾರ್ಮಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಅಪ್ಪಯ್ಯಣ್ಣ, ಪದ್ಮಾವತಿ ಬಿ.ಮುನೇಗೌಡ, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ, ನಿರ್ದೇಶಕ ಲಕ್ಷ್ಮೀ ನಾರಾಯಣ್, ತಾಲೂಕು ಅಧ್ಯಕ್ಷ ಲಕ್ಷ್ಮೀಪತಿ, ಮಧುರೆ ಹೋಬಳಿ ಅಧ್ಯಕ್ಷ ಆರ್.ರಂಗಸ್ವಾಮಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮೀ, ಹಿರಿಯ ಸದಸ್ಯ ತ.ನ.ಪ್ರಭುದೇವ್, ಮುಖಂಡರಾದ ದೇವರಾಜಮ್ಮ, ಶಾಂತಮ್ಮ, ಧರ್ಮೇಂದ್ರ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

