ದೊಡ್ಡಬಳ್ಳಾಪುರ, (ಡಿ.12): ತಾಲೂಕಿನ ಎಳ್ಳುಪುರ ಗೇಟ್ ಬಳಿ ಗುರುವಾರ ರಾತ್ರಿ ಸರಣಿಕಳ್ಳತನ ಪ್ರಕರಣ ವರದಿಯಾಗಿದೆ.

ಎಳ್ಳುಪುರ ಗೇಟ್ ಬಳಿ ಇರುವ ತಿರುಮಲ ಮೆಡಿಕಲ್ ಸ್ಟೋರ್, ನಂದಿನಿ ಹಾಲಿನ ಕೇಂದ್ರ ಹಾಗೂ ಮೋಬೈಲ್ ಅಂಗಡಿಯೊಂದಕ್ಕೆ ನುಗ್ಗಿರುವ ಕಳ್ಳನೋರ್ವ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದಾನೆ.

ಕಳ್ಳತನ ನಡೆಸಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
