ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, (ಡಿ.17): ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ  ನೇಕಾರ ಸಮ್ಮಾನ ಯೋಜನೆ,  2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು 48 ಜಿಎಸ್ ಟಿ ಕೌನ್ಸಿಲ್ ಸಭೇಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ವೃತ್ತಿಪರ ನೇಕಾರರಿಗೆ ನೀಡುವ ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳ: ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವೃತ್ತಿಪರ ನೇಕಾರರ  ಕೈಮಗ್ಗಕ್ಕೆ ಕೈಗಾರಿಕಾ ಇಲಾಖೆಯಿಂದ ಶೇ. 30 ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಅದನ್ನು ಶೇ. 50 ರಷ್ಟು ಹೆಚ್ಚಿಸುವ ಬೇಡಿಕೆಯನ್ನು ಒಪ್ಪಲಾಗಿದೆ. ನೇಕಾರ ಸಮ್ಮಾನ ಯೋಜನೆಯಡಿ 46000 ಕೈಮಗ್ಗ ನೇಕಾರರಿಗೆ 5000 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ತೀರ್ಮಾನಿಸಲಾಗಿದೆ. ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ “ಗುಡಿ ಕೈಗಾರಿಕೆ”ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದರು.

ಕೈಮಗ್ಗ ನಿಗಮದ ಮೂಲಕ ಸಮವಸ್ತ್ರ ಪೂರೈಕೆ: ಸರ್ಕಾರದ ನೇಕಾರ (ಕೈಮಗ್ಗ ಮತ್ತು ವಿದ್ಯುತ್ ಚಾಲಿತ) ನಿಗಮಗಳ ಉತ್ಪಾದನಾ ಸಾಮರ್ಥ್ಯದ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಯಿತು. ಇದನ್ನು ಡಿಸೆಂಬರ್ ತಿಂಗಳಿನಲ್ಲಿಯೇ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ. 25ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸಲು ತೀರ್ಮಾನಿಸಲಾಯಿತು ಎಂದರು.

ನೇಕಾರರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ: ನೇಕಾರರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನಿಸಲಾಯಿತು. 5 ಎಚ್‍.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್ ಒದಗಿಸಲ ಹಾಗೂ ನಿಗದಿತ ದರದಲ್ಲಿ ಶೇ. 50 ರಿಯಾಯಿತಿ ನೀಡಲು ತೀರ್ಮಾನಿಸಲಾಯಿತು ಎಂದರು.

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ವೃತ್ತಿಪರ ಕೂಲಿ ನೇಕಾರರು, ಕೃಷಿ  ಕಾರ್ಮಿಕರು , ಹೀಗೆ ವಿವಿಧ ಅಸಂಘಟಿತ ಕಾರ್ಮಿಕರ ಒಂದು ಮಂಡಳಿ ರಚಿಸಿ, ಅವರಿಗೂ ವಿವಿಧ ಸೌಲಭ್ಯಗಳನ್ನು ನೀಡುವ ಬೇಡಿಕೆ ಇದ್ದು, ಮುಂದಿನ ಆಯವ್ಯಯದ ಮಂಡನೆಯ ಸಂದರ್ಭದಲ್ಲಿ ತೀರ್ಮಾನಿಸಲಾಗುವುದು.

ಡಿಸೆಂಬರ್ ಅಂತ್ಯದೊಳಗೆ ನೇಕಾರರ ಮಕ್ಕಳಿಗೆ ವಿದ್ಯಾನಿಧಿ: ನೇಕಾರರ ಮಕ್ಕಳಿಗೆ ವಿದ್ಯಾನಿಧಿಯನ್ನು ಡಿಸೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು.  ಇದಕ್ಕೆ ಪೂರಕ ಮಾಹಿತಿಗಳನ್ನು ಸಂಗ್ರಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಡೀ ನೇಕಾರಿಕೆಯ ವೃತ್ತಿಯಲ್ಲಿ ಸಂಶೋಧನೆಗಳಾಗಿವೆ. ಈಗಾಗಲೇ ಸಿಎನ್ ಸಿ ಮಗ್ಗಗಳಿವೆ. ಅವುಗಳನ್ನು ಗುಣಮಟ್ಟದ ಉತ್ಪಾದನೆ  ಹಾಗೂ ಉತ್ಪಾದಕತೆ ಹೆಚ್ಚಾಗಬೇಕಿದೆ. ಮುಂದಿನ  ಆಯವ್ಯಯಲ್ಲಿ ಈ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!