ಬೆಂ.ಗ್ರಾ.ಜಿಲ್ಲೆ, (ಡಿ.17): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ 2022 ರ ಜನವರಿ 30 ರಂದು ಸಂಜೆ 06:00 ಗಂಟೆಯವರೆಗೂ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ/ ಸಂತೆ/ ಸಾಗಾಣಿಕೆಗಳನ್ನು ನಿರ್ಬಂಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಆದ್ದರಿಂದ ನೆಲಮಂಗಲ ತಾಲ್ಲೂಕು, ಸೋಂಪುರ ಹೋಬಳಿ, ಶಿವಗಂಗೆ ಗ್ರಾಮದ, ಶ್ರೀ ಗಂಗಾಧರೇಶ್ವರಸ್ವಾಮಿ ಮತ್ತು ಹೊನ್ನಾದೇವಿ ದೇವಾಲಯದ 2022-23ನೇ ಸಾಲಿನ ಗಿರಿಜಾಕಲ್ಯಾಣ ಮಹೋತ್ಸವದ ಸಂಬಂಧ ಸೇರುವ ದನಗಳ ಜಾತ್ರೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ರೈತ ಬಾಂಧವರು ಸಹಕರಿಸಲು ಕೋರಿದೆ ಎಂದು ಶಿವಗಂಗೆಯ ಶ್ರೀ ಗಂಗಾಧರೇಶ್ವರ ಮತ್ತು ಹೊನ್ನಾದೇವಿ ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

