ಸಾಸಲು ಗ್ರಾಮದಲ್ಲಿ ಅಕ್ಷರ ಜಾತ್ರೆ ಆರಂಭ..!! ಇಂದಿನಿಂದ 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ದೊಡ್ಡಬಳ್ಳಾಪುರ, (ಡಿ.18): 12ನೇ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಡಿ.18 ಮತ್ತು 19 ರಂದು ಸಾಸಲು ಹೋಬಳಿ ಕೇದ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢ ಶಾಲಾ ಆವರಣದಲ್ಲಿ ನಡೆಯಲಿದೆ. 

ಇದೇ ಪ್ರಥಮ ಬಾರಿಗೆ ಸಾಸಲು ಹೋಬಳಿ ಕೇಂದ್ರದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಸಾಸಲು ಗ್ರಾಮದಲ್ಲಿನ ಶ್ರೀಆಂಜನೇಯ ಸ್ಚಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥಗೌಡ ಅವರು ಸಮ್ಮೇಳನಾಧ್ಯಕ್ಷ ಚಿನ್ನುಪ್ರಕಾಶ್ ಶ್ರೀರಾಮನಹಳ್ಳಿ, ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು ಅವರ ಮೆರವಣಿಗೆಯನ್ನು ಉದ್ಘಾಟಿಸಿದರು‌.

ಈ ವೇಳೆ ತಹಶೀಲ್ದಾರ್ ಮೋಹನಕುಮಾರಿ, ಭಾರತ್ ಸೇವಾದಳ್ ಜಿಲ್ಲಾ ಅಧ್ಯಕ್ಷ ಜಿ.ಲಕ್ಷ್ಮೀಪತಿ,  ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಗೌರವ ಕಾರ್ಯದರ್ಶಿ ಕೇಶವಮೂರ್ತಿ ಮತ್ತಿತರರಿದ್ದಾರೆ.

ಸಾದ್ವಿಮಣಿ ಸಾಸಲು ಚಿನ್ನಮ್ಮ ವೇದಿಕೆಯಲ್ಲಿ  ಕಾನೂನು ತಜ್ಞ ಸಿ.ಎಚ್.ಹನುಮಂತರಾಯ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶಾಸಕ ಟಿ.ವೆಂಕಟರಮಣಯ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾದೀಶರಾದ ದೊಡ್ಡೇಗೌಡರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಅವರು ಹರಿಭಾಸ್ಕರ ಪಾರ್ಥ ಸಾರಥಿ ಎಂಬ ವಿಠಲದಾಸರ ಸಮಗ್ರ ಕೃತಿ ಶ್ರೇಣಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪ್ರಕಟಿಸಿರುವ ಸಾಧಕ ಕೃಷಿಕರು ಹಾಗೂ ಸಮ್ಮೇಳಾನಾಧ್ಯಕ್ಷರ ನುಡಿ ಕೈಪುಡಿ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸುವ ಅಥಿತಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನಡೆಯುವ ಗೌರವ ಸಮರ್ಪಣೆಯಲ್ಲಿ ಮಣಿಹಾರ,ಶಾಲುಗಳನ್ನು ಬಳಸದೆ ಕನ್ನಡ ಪುಸ್ತಕ, ಅಭಿನಂದನ ಪತ್ರಗಳನ್ನು ನೀಡಲಾಗುತ್ತಿದೆ. ಎರಡು ದಿನಗಳು ವಿವಿಧ ವಿಷಯಗಳ ಕುರಿತಂತೆ ವಿಚಾರಗೋಷ್ಠಿ, ಕವಿಗೋಷ್ಠಿ,ಶಾಲಾ ಮಕ್ಕಳು ಹಾಗೂ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]