ಹರಿತಲೇಖನಿ ದಿನಕ್ಕೊಂದು ಕಥೆ: ಐದು ಅಮೂಲ್ಯ ಪ್ರಶ್ನೆಗಳು

ಒಂದೂರಿನಲ್ಲಿ ಒಬ್ಬ ರಾಜನಿದ್ದ. ಅವನ ಆಸ್ಥಾನಕ್ಕೆ ಒಮ್ಮೆ ಸುಜ್ಞಾನಿ ಎಂಬ ಪಂಡಿತ ಬಂದ. ಅವನು ರಾಜನನ್ನು ಕುರಿತು, “ಮಹಾರಾಜರೇ, ನಿಮ್ಮ ಆಸ್ಥಾನದ ಪಂಡಿತರು ಕೇಳಿದ ಯಾವುದೇ ಪ್ರಶ್ನೆಗೆ ತೃಪ್ತಿಕರ ಉತ್ತರ ನೀಡುವೆ. ನಿಮಗೆ ಸರಿ ಎನಿಸಿದರೆ ತಕ್ಕ ಕಾಣಿಕೆ ನೀಡಿರಿ” ಎಂದು ಬೇಡಿಕೊಂಡನು. 

ರಾಜನ ಒಪ್ಪಿಗೆಯ ಮೇರೆಗೆ ಸಭೆ ಕರೆಯಲಾಯಿತು. ಒಬ್ಬ ಆಸ್ಥಾನದ ಪಂಡಿತನು ಸುಜ್ಞಾನಿಯನ್ನು ಕುರಿತು. “ಸಕಲ ಮಾನವ, ಪಕ್ಷಿ, ಪ್ರಾಣಿ, ಕ್ರಿಮಿ ಕೀಟಗಳು ಹಾಗೂ ಗಿಡ ಮರಗಳನ್ನು ಕಾಪಾಡುವ ಕರುಣಾಮ ತಾಯಿ ಯಾರು? ಎಂದು ಕೇಳಿದನು. ಸುಜ್ಞಾನಿ ಪಂಡಿತನು. “ಭೂಮಿ ತಾಯಿ. ಮಾನವನಿಗೆ ಮನೆ ಕಟ್ಟಲು ಕಲ್ಲು – ಮಣ್ಣು, ಕಟ್ಟಿಗೆ ಕೊಡುವವಳು ಭೂಮಿತಾಯಿ. ಜೋಳ – ಗೋಧಿ ಮುಂತಾದ ಆಹಾರ ಧಾನ್ಯ ಬೆಳೆಯುವವಳು ಅವಳು. ಗಿಡಗಳ ಮೂಲಕ ಹಣ್ಣು, ಕಾಯಿ ನೀಡುವಳು. ಹೊಳೆ, ಕೆರೆ, ಸರೋವರ ಮೂಲಕ ನೀರು ಕೊಡುವವಳು ಭೂಮಿ ತಾಯಿಯೇ” ಎಂದು ಉತ್ತರಿಸಿದನು. 

ಎರಡನೇಯ ಪಂಡಿತನು, “ಸಕಲ ಜೀವಿಗಳನ್ನು ರಕ್ಷಣೆ ಮಾಡುವ ನಿಜವಾದ ರಾಜನು ಯಾರು” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು “ನಿಜವಾದ ರಾಜನೆಂದರೆ ಮಳೆರಾಜನೆ. ಮಳೆರಾಜನು ಸುರಿಸುವ ಮಳೆ ನೀರಿನಿಂದಲೇ ರೈತ ಆಹಾರ ಧಾನ್ಯ ಬೆಳೆಯುತ್ತಾನೆ. ಲತೆಗಳು ಹೂ ಕೊಡುವವು. ಗಿಡಗಳು ಹಣ್ಣು ಕೊಡುವವು. ಹೊಳೆ ಕೆರೆಗಳು ನೀರು ಕೊಡುವುದು ಮಳೆ ರಾಜನ ಕೃಪೆಯಿಂದಲೇ. ಈ ರೀತಿಯಲ್ಲಿ ಸಕಲ ಜೀವಿಗಳನ್ನು ರಕ್ಷಿಸುವ ರಾಜನೆಂದರೆ ಮಳೆರಾಜನೆ” ಎಂದು ಉತ್ತರಿಸಿದನು. 

ಮೂರನೇಯ ಪಂಡಿತನು. “ಮಾನವ ಶರೀರವನ್ನು ಆರೋಗ್ಯಪೂರ್ಣವಾಗಿ ಬೆಳವಣಿಗೆ ಮಾಡುವ ಎರಡು ಮುಖ್ಯ ವಸ್ತುಗಳು ಯಾವುವು?” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು. “ನಮ್ಮ ಶಾರೀರಿಕ ಆರೋಗ್ಯ ಚೆನ್ನಾಗಿರಲು ಒಳ್ಳೆಯ ಶುಚಿಯಾದ ಆಹಾರ ಹಾಗೂ ಸ್ವಚ್ಛ ನೀರೆ ಬೇಕು. ಅನುಭವಿಗಳು ಇದನ್ನೇ “ಕೂಳು ಕುತ್ತು, ನೀರು ಪಿತ್ತು” ಅಂದಿದ್ದಾರೆ. ಅಂದರೆ ಅಶುದ್ಧ ಆಹಾರ ಹಾಗೂ ಹೊಲಸು ನೀರು ನಮ್ಮ ಶರೀರವನ್ನು ರೋಗಮಾಯ ಮಾಡುತ್ತವೆ. ಸತ್ವಯುತ ಬಿಸಿ ಬಿಸಿ ಹಿತಮಿತವಾದ ಆಹಾರ ಹಾಗೂ ಪರಿಶುದ್ಧವಾದ ನೀರು ಆರೋಗ್ಯಪೂರ್ಣ ಬೆಳವಣಿಗೆಯ ಎರಡು ಮುಖ್ಯ ವಸ್ತುಗಳಾಗಿವೆ” ಎಂದು ಉತ್ತರಿಸಿದನು. 

ನಾಲ್ಕನೇಯ ಪಂಡಿತನು, “ನಿಸರ್ಗದಲ್ಲಿ ಜೀವಿಸುವ ಪಕ್ಷಿ, ಪ್ರಾಣಿ, ಮನುಷ್ಯ, ಸಸ್ಯ, ಕ್ರಿಮಿ ಕಿಟಾದಿಗಳು ನಿಜವಾದ ದೇವರು ಯಾರು? ಎಂದು ಕೇಳಿದನು. ಸುಜ್ಞಾನಿಯು, “ಆಹಾರವಿಲ್ಲದೆ – ನೀರಿಲ್ಲದೆ ಯಾವು ಜೀವಿಯು ಬದುಕಲಾರದು. ಆಹಾರ ಧಾನ್ಯಗಳು ಹುಲುಸಾಗಿ ಬೆಳೆಯಲು ಸೂರ್ಯನ ಬಿಸಿಲು, ಬೆಳಕು ಅವಶ್ಯಕ. ಸೂರ್ಯನ ಪ್ರಖರ ಕಿರಣಗಳಿಂದ ಸಮುದ್ರದ ನೀರು ಕಾಯ್ದು ಉಗಿಯಾಗಿ, ಅದ್ರವಾಗಿ ಮೇಲೆ ಹೋಗುತ್ತದೆ. ಆ ಉಗಿಗೆ ತಂಪು ತಗುಲಿದಾಗ, ಮೋಡಗಳಿಂದ ಮಳೆ ಸುರಿಯುತ್ತದೆ. ಈ ರೀತಿ ಸುರಿದ ಮಳೆಯಿಂದ ಬೆಳೆಗಳು ಬೆಳೆದು ನಮ್ಮ ಆಹಾರವಾಗಿ ಜೀವಿಸಲು ನೆರವಾಗುತ್ತವೆ. ಮಳೆಯಿಂದ ಪಡೆದ ನೀರು ಕುಡಿಯಲು ಉಪಯೋಗವಾಗುತ್ತದೆ. ಹೀಗೆ ನಮ್ಮನ್ನು ಕಾಪಾಡುವ ನಿಜವಾದ ದೇವರೆಂದರೆ ಸೂರ್ಯದೇವೆನೆ” ಎಂದು ವಿವರಿಸಿದನು. 

ಐದನೇ ಪಂಡಿತನು, “ಮನುಷ್ಯ ನಿಜವಾದ ಪ್ರಾಣ ಯಾವುದು? ಎಂದು ಕೇಳಿದನು. ಸುಜ್ಞಾನಿಯು, “ಪ್ರಾಣವೆಂದರೆ ಉಸಿರು. ಉಸಿರಾಟ ನಿಂತರೆ ಮನುಷ್ಯ ಸತ್ತಂತೆಯೇ. ಆದ್ದರಿಂದ ಮನುಷ್ಯ ನಿಜವಾದ ಪ್ರಾಣ ಎಂದರೆ ಉಸಿರಾಟವೇ ಆಗಿದೆ. ಅನುಲೋಮ – ವಿಲೋಮ ಕ್ರಿಯೆ ಹಾಗೂ ಕಪಾಲಭಾತಿ ಮೊದಲಾದ ಪ್ರಾಣಾಯಾಮ, ಯೋಗ ಕ್ರಿಯೆಗಳು ಆರೋಗ್ಯಪೂರ್ಣ ಜೀವನಕ್ಕೆ ಪಂಚ ಪ್ರಾಣವೆಂದು ತಿಳಿಯಬೇಕು” ಎಂದು ಹೇಳಿದನು. ರಾಜನೂ, ಆಸ್ಥಾನ ಪಂಡಿತರು ಸುಜ್ಞಾನಿ ಪಂಡಿತನ ವಾಕ್ ಚಾತುರ್ಯವನ್ನು ತುಂಬಾ ಮೆಚ್ಚಿಕೊಂಡರು. ಅವನಿಗೆ ಯೋಗ್ಯ ಕಾಣಿಕೆ ನೀಡಿ ಗೌರವಿಸಿದರು. 

ಕೃಪೆ: ಸಾಮಾಜಿಕತಾಣ. ಸಂಗ್ರಹ: ನರಸಿಂಹಮೂರ್ತಿ ಬರಗೂರು

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]