ಬೆಂಗಳೂರು, (ಡಿ.12): ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯಪಾಲರ ಆದೇಶಾನುಸಾರ ಪಂಚಾಯತ್ ರಾಜ್ ಇಲಾಖೆಯ ಜಂಟಿ ಕಾರ್ಯದರ್ಶಿ ಎಂ.ಎನ್.ಬಾನೂಳ್ಳಿ ಆದೇಶಿಸಿದ್ದು, ಅದರನ್ವಯ ಗ್ರಾಮಪಂಚಾಯಿತಿ ಅಧ್ಯಕ್ಷರಿಗೆ ರೂ.6000, ಉಪಾಧ್ಯಕ್ಷರಿಗೆ ರೂ.4000 ಹಾಗೂ ಸದಸ್ಯರಿಗೆ ರೂ.2000ಕ್ಕೆ ಹೆಚ್ಚಿಸಲಾಗಿದೆ.

ಈ ಮುಂಚೆ ಅಧ್ಯಕ್ಷರಿಗೆ ರೂ.3000, ಉಪಾಧ್ಯಕ್ಷರಿಗೆ ರೂ.2000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವ ಧನ ನೀಡಲಾಗುತ್ತಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
