ದೊಡ್ಡಬಳ್ಳಾಪುರ, (ಡಿ.28): ಅಪರಾಧ ಕೃತ್ಯಗಳನ್ನು ತಡೆಗಟ್ಟುವುದು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ, ಪೊಲೀಸ್ ಇಲಾಖೆವತಿಯಿಂದ ಅಪರಾಧ ತಡೆ ಮಾಸಾಚರಣೆ ಆಯೋಜಿಸಲಾಗಿದೆ.
ಈ ನಿಟ್ಟಿನಲ್ಲಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರೇಣುಕಾ ಯಾದವ್ ಅವರು, ನಗರದ ಪ್ರಮುಖ ಬೀದಿಗಳಲ್ಲಿ ಸರಗಳ್ಳತನ ಸೇರಿದಂತೆ ಹಲವು ಅಪರಾಧ ಕೃತ್ಯಗಳ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಈ ವೇಳೆ ಸಿಬ್ಬಂದಿಗಳಾದ ನಾಗರಾಜ್, ಅನಂತಕುಮಾರ್, ರೂಪೇಶ್ ಯಾದವ್, ಶಿವಣ್ಣ, ಲೋಕೇಶ್, ರಾಜ್ ಕುಮಾರ್ ಮತ್ತಿತರರಿದ್ದರು.
ಅಪರಾದ ತಡೆ ಮಾಸಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪ್ಲೆಕ್ಸ್ ಅಳವಡಿಸಲಾಗಿದ್ದು, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪೊಲೀಸ್ ಇಲಾಖೆ ಮುಂದಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….