ದೊಡ್ಡಬಳ್ಳಾಪುರ, (ಡಿ.28): ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಬುಧವಾರ ನಡೆದ ಬ್ರಹ್ಮರಥೋತ್ಸವಕ್ಕೆ ಬಂದಿದ್ದ ಮಹಿಳೆಯೋರ್ವರು 60 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಗ್ರಾಮದ ನಿವಾಸಿ ಗೌರಮ್ಮ ಮಾಂಗಲ್ಯ ಸರ ಕಳೆದುಕೊಂಡವರಾಗಿದ್ದಾರೆ.
ಬ್ರಹ್ಮರಥೋತ್ಸವಕ್ಕೆಂದು ಬುಧವಾರ ಬೆಳಿಗ್ಗೆ ಕುಟುಂಬ ಸಮೇತ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ನಾಗರಪೂಜೆ ನೆರವೇರಿಸಿದ್ದಾರೆ.
ಬಳಿಕ ದೇವರ ದರ್ಶನ ಪಡೆದು, ದೊಡ್ಡಬಳ್ಳಾಪುರಕ್ಕೆ ವಾಪಸಾಗಲು ಸಾರಿಗೆ ಸಂಸ್ಥೆ ಬಸ್ ಒಳಗೆ ಸೀಟಿನಲ್ಲಿ ಕುಳಿತುಕೊಂಡಾಗ ಮಾಂಗಲ್ಯ ಸರ ಕಳುವಾಗಿರುವುದು ಗೊತ್ತಾಗಿದೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….