ಜನರ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಬಗೆಹರಿಸಲು ಕ್ರಮವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಬೆಂ.ಗ್ರಾ.ಜಿಲ್ಲೆ, (ಡಿ.28): ಜನಸಾಮಾನ್ಯರ ಸಮಸ್ಯೆಗಳನ್ನು ಕೂಲಂಕುಷವಾಗಿ ಆಲಿಸಿ, ಪ್ರಾಥಮಿಕ ಹಂತದಲ್ಲಿಯೇ ಬಗೆಹರಿಸಲು ಕ್ರಮ ವಹಿಸುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 4ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು ಎಂದರಲ್ಲದೆ, ಸಭೆಗಳನ್ನು ನಡೆಸುವುದರಿಂದ  ನಿವೇಶನ, ರಸ್ತೆ, ಸ್ಮಶಾನ ಭೂಮಿ ಮಂಜೂರು, ದೌರ್ಜನ್ಯ ಪ್ರಕರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದಾಗಿದೆ. ಸಮಸ್ಯೆಗಳಿರುವ ಸ್ಥಳಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯೊಂದಿಗೆ ಕ್ಷೇತ್ರ ಭೇಟಿ ಮಾಡಬೇಕು, ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಜಿಲ್ಲಾ ಹಂತದಲ್ಲಿ ಪ್ರಸ್ತಾಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರಲ್ಲದೆ ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು ಎಂದರು.

ಸ್ಮಶಾನ ಭೂಮಿ ಮಂಜೂರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ಕಾಲೋನಿಗಳ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರಲ್ಲದೆ ವಸತಿರಹಿತರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಆಶ್ರಯ ನಿವೇಶನ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು. 

ಹೊಸಕೋಟೆ ತಾಲ್ಲೂಕಿನಲ್ಲಿ ಬುದ್ಧವಿಹಾರ ನಿರ್ಮಾಣ ಮಾಡಲು ವಾಗಟ ಗ್ರಾಮದ ಸರ್ಕಾರಿ ಗೋಮಾಳದ ಜಮೀನಿನಲ್ಲಿ ಐದು ಎಕರೆ ಜಮೀನು ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಹಕ್ಕುಪತ್ರ ವಿತರಣೆ ಬಾಕಿ ಇರುವ ಫಲಾನುಭವಿಗಳಿಗೆ ನಿಯಮಾನುಸಾರ ಹಕ್ಕುಪತ್ರಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರಲ್ಲದೆ ಸಾರ್ವಜನಿಕರು ಭೇಟಿ ನೀಡುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಹಶಿಲ್ದಾರ್ ಕಚೇರಿಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಸೂಚಿಸಿದರು.

2022ರ ಜನವರಿ ಮಾಹೆಯಿಂದ ನವೆಂಬರ್ ಮಾಹೆಯವರೆಗೆ 43 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು 16 ಪ್ರಕರಣಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 41 ಜನ ಸಂತ್ರಸ್ತರಿಗೆ ರೂ. 60.92 ಲಕ್ಷ  ರೂ.ಗಳ ಪರಿಹಾರಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದರೊಂದಿಗೆ, ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ನ್ಯಾಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು.ಎನ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್, ಸೇರಿದಂತೆ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಡಿವೈಎಸ್ಪಿ‌ಗಳು, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರುಗಳು, ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!