ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಮಗುಚಿ ಬಿದ್ದ KSRTC ಬಸ್…!!

ದೊಡ್ಡಬಳ್ಳಾಪುರ, (ಏ.23): ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಮಾಕಳಿ ಬಳಿ ಸಂಭವಿಸಿದೆ.

ಬೆಂಗಳೂರಿನಿಂದ – ಹಿಂದುಪುರಕ್ಕೆ ತೆರಳುತ್ತಿದ್ದ KSRTC ಬಸ್ ಮಾಕಳಿ ತಿರುವಿನಲ್ಲಿ ಚಾಲಕನ ನಿಯಂತ್ರ ತಪ್ಪಿ ಮಗುಚಿ ಬಿದ್ದಿದೆ.

ಘಟನೆಯ ಅನೇಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವುಂಟಾಗಿಲ್ಲ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!