ದೊಡ್ಡಬಳ್ಳಾಪುರ, (ಏ.23): ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಜೆಡಿಎಸ್ ಮುಖಂಡ ಹುಸ್ಕೂರು ಆನಂದ್ ಅವರು ವರಿಷ್ಠರ ಸಲಹೆ ಮೇರೆಗೆ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡರಿಗೆ ಬೆಂಬಲ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿದ ಹುಸ್ಕೂರು ಆನಂದ್ ಅವರು, ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತು ಅಸಮಾಧಾನ ಇದ್ದಿದ್ದು ನಿಜ. ಆದರೆ ಪಕ್ಷದ ನಿರ್ಣಯಕ್ಕೆ ತಲೆಬಾಗಿ, ವರಿಷ್ಠರ ಸಲಹೆಯ ಮೇರೆಗೆ ಬಿ.ಮುನೇಗೌಡ ಅವರಿಗೆ ಬೆಂಬಲ ನೀಡಿ, ಚುನಾವಣೆ ಕಾರ್ಯದಲ್ಲಿ ತೊಡಗುತ್ತಿದ್ದೇನೆ.
ಅಸಮಾಧಾನದ ಕುರಿತು ವರಿಷ್ಠರು ಮಾತುಕತೆ ನಡೆಸಿದ್ದು ಫಲಪ್ರದವಾಗಿದೆ. ಅಲ್ಲದೆ ಕುಮಾರಸ್ವಾಮಿ ಅವರು ನನ್ನ ಸೇವೆಯ ಗುರುತಿಸಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯ ನೀಡಿದ್ದು, ಈ ಚುನಾವಣೆಯಲ್ಲಿ ಮುನೇಗೌಡರ ಜಯಶೀಲರನ್ನಾಗಿಸಿಕೊಂಡು ಬರುವಂತೆ ಸೂಚಿಸಿದ್ದಾರೆ.
ಈ ಮುಂಚೆ ನೀಡಲಾಗಿದ್ದ ಷರತ್ತುಗಳನ್ನು ಮುನೇಗೌಡ ಅವರು ಮುಕ್ತವಾಗಿ ಸ್ವೀಕರಿಸಿದ್ದು, ಭರವಸೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಹುಸ್ಕೂರು ಆನಂದ್ ಅವರನ್ನು, ನಗರದ ಜೆಡಿಎಸ್ ಕಚೇರಿಯಲ್ಲಿ ಅಭ್ಯರ್ಥಿ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಿ, ಚಿತ್ರ ನಿರ್ಮಾಪಕ ಸಾರಥಿ ಪ್ರಕಾಶ್ ಅಭಿನಂದನೆ ಸಲ್ಲಿಸಿದರು.
ಈ ವೇಳೆ ನಗರಸಭೆ ಮಾಜಿ ಸದಸ್ಯ ಕಲ್ಲುಪೇಟೆ ಚಂದ್ರು, ವಕ್ತಾರ ಕುಂಟನಹಳ್ಳಿ ಮಂಜುನಾಥ್, ಮುಖಂಡರಾದ ಗಿರೀಶ್, ಗಿರಿ ರಾಮಕೃಷ್ಣಪ್ಪ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….