ದೊಡ್ಡಬಳ್ಳಾಪುರ: ತೂಬಗೆರೆಯಲ್ಲಿ ಸಂಭ್ರಮದಿಂದ ಬಸವ ಜಯಂತಿ ಆಚರಣೆ

ದೊಡ್ಡಬಳ್ಳಾಪುರ, (ಏ.23): ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಶ್ವಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯುವ ಮುಖಂಡರಾದ ಉದಯ ಆರಾಧ್ಯರವರು ಮಾತನಾಡಿ 12ನೇಯ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು.

ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ. ಬಸವಣ್ಣನವರ. ಇವರ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಇದರ ಜೊತೆಗೆ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡುವುದು ಅತ್ಯಂತ ವಿಶೇಷವಾಗಿದೆ ಎಂದರು.

ವಾದ್ಯ – ಮೇಳದೊಂದಿಗೆ ಆರತಿಗಳನ್ನು ಹಿಡಿದ ಹೆಂಗಸರು, ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರಗೆ ಸ್ವಾಮಿ ಅರ್ಪಿಸಿದರು.

ನೂರಾರು ಭಕ್ತರು ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಬಸವ ಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜಿಸಿ ಭಕ್ತಿಭಾವ ಮೆರೆದರು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ ನಡೆಯಿತು.

ವಿಶೇಷ ಪೂಜಾ ಕಾರ್ಯಕ್ರಮಗಳು ನಂತರ  ಸಂಜೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಯಿತು ವೀರಗಾಸೆ ಸೇರಿದಂತೆ ಅನೇಕ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಗ್ರಾಮದ ಹಿರಿಯರಾದ ವೆಂಕಟೇಶಪ್ಪ, ನಾರಾಯಣಪ್ಪ, ರವಿ ಮುಂತಾದವರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!