ಬಾಗಲಕೋಟೆ, (ಏ.23): ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೆ ಕರ್ನಾಟಕಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೂಡಲ ಸಂಗಮದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕೂಡಲಸಂಗಮದ ಸಂಗಮನಾಥ ದೇವಸ್ಥಾನ ಮತ್ತು ಐಕ್ಯಲಿಂಗದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಕರ್ನಾಟಕದ ಪ್ರವಾಸವನ್ನು ಪ್ರಾರಂಭಿಸಿದರು.
ಬಳಿಕ ಬಣವಣ್ಣನವರ ಅನುಭವ ಮಂಟಪದಲ್ಲಿ ನಡೆದ ವೇದಿಕೆ ಕಾರ್ಯಕ್ರಮಕ್ಕೆ ವಿಭೂತಿ ಧರಿಸಿ ಬಂದ ರಾಹುಲ್ ಮಾತನಾಡಿ, ಹಿಂದೂಸ್ತಾನದ ಪ್ರಜಾಪ್ರಭುತ್ವ ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ ಎಂದರು.
ಬಳಿಕ ಬಸವಣ್ಣನವರ ಅನುಭವ ಮಂಟಪದಲ್ಲಿ ನಡೆದ ‘ಬಸವ ಜಯಂತಿ’ಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ, ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ವೇದಿಕೆಯನ್ನು ಹಂಚಿಕೊಂಡಿದ್ದರು. ಜೊತೆಗೆ ಇಪ್ಪತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಹುಲ್ ಗಾಂಧಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಾಥ್ ನೀಡಿದ್ದಾರೆ. ಚುನಾವಣೆಗೆ ಕಾಂಗ್ರೆಸ್ಸಿನ ಪ್ರಮುಖ ಸ್ಟಾರ್ ಕ್ಯಾಂಪೇನರ್ ಆಗಿರುವ ರಾಹುಲ್ ಗಾಂಧಿ ಎರಡು ದಿನದ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….