ದೊಡ್ಡಬಳ್ಳಾಪುರ, (ಏ.26): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರವಾಗಿ ಮತ ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲವೆ ಅಭ್ಯರ್ಥಿಗಳು ತಮಗೆ ಸರಿಯಿಲ್ಲದೆ ಹೋದಾಗ ನೋಟಾ ಮತವನ್ನಾದರೂ ಚಲಾಯಿಸುವ ಮೂಲಕ ತಮ್ಮ ಮತದಾನದ ಹಕ್ಕು ಚಲಾಯಿಸಲು ಅವಕಾಶವಿದೆ ಎಂದು ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್ ತಿಳಿಸಿದರು.
ಚುನಾವಣೆಯ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ನಗರಸಭೆಯ ವತಿಯಿಂದ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಲು ಇಂದು ನಗರಸಭೆಯ ಕಚೇರಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ಅಭಿವೃದ್ಧಿಗಾಗಿ ಮತ್ತು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ತಮಗೆ ಒಬ್ಬ ಪ್ರತಿನಿಧಿಯ ಅವಶ್ಯಕತೆ ಇದ್ದು, ಅರ್ಹ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ಗ್ರಾಮ, ನಗರ, ತಾಲೂಕು, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಆಯ್ಕೆ ಮಾಡಿ ಕಳಿಸುವ ಜವಬ್ದಾರಿ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದರು.
ಈ ವೇಳೆ ನಗರಸಭೆ ಕಚೇರಿ ವ್ಯವಸ್ಥಾಪಕ ಆಂಜನೇಯಲು, ಸಿ.ಎ.ಓ ಪ್ರಹಲ್ಲಾದ್, ಕಂದಾಯ ನಿರೀಕ್ಷಕ ಕೆ.ಎನ್.ಗಿರೀಶ್ ಸೇರಿದಂತೆ ಆರೋಗ್ಯ ಶಾಖೆಯ ಸಿಬ್ಬಂದಿ, ಕಚೇರಿಯ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….