ದೊಡ್ಡಬಳ್ಳಾಪುರ, (ಮೇ.20): ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುರುಬರ ಸಂಘದಿಂದ ಇಂದು ನಗರದ ಬಸವಣ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿ ಬಸವಣ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕುರುಬರ ಸಂಘದ ಪದಾಧಿಕಾರಿಗಳು, ಸಿಹಿ ವಿತರಿಸಿ ಸಂಭ್ರಮಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಬಂಡೆ ನರಸಿಂಹಮೂರ್ತಿ, ಗೌರವ ಅಧ್ಯಕ್ಷ ತಿಮ್ಮೇಗೌಡ್ರು, ಪ್ರಧಾನ ಕಾರ್ಯದರ್ಶಿಗಳಾದ ಎಂ. ಮಲ್ಲೇಶ್, ಮೋಹನ್, ಸಂಘಟನಾ ಕಾರ್ಯದರ್ಶಿ ನಾಗರಾಜ್, ಖಜಾಂಚಿ ಅರುಣ್ ಕುಮಾರ್, ಸಹ ಕಾರ್ಯದರ್ಶಿ ವೇಣು, ಮುಖಂಡರಾದ ಶ್ರೀನಿವಾಸ್, ಮಧು, ಮಹೇಶ್, ಹರ್ಷ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….