ಕರ್ನಾಟಕದ ಜನತೆಯ ನಿರೀಕ್ಷೆ ಹುಸಿ: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಬೆಂಗಳೂರು, (ಮೇ.20): ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು.

ಇಂದು ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ‌ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ ಅವರಿಗೆ ನಿರಾಶೆ ಮೂಡಿಸಿದ್ದಾರೆ. ಕೇವಲ ಘೋಷಣೆ ಮಾತ್ರ ಮಾಡಲಾಗಿದ್ದು, ಎಂದಿನಿಂದ ಜಾರಿ ಅಂತ ವಿವರವಾಗಿ ಹೇಳಿಲ್ಲ ಎಂದರು.

ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಹೇಳುತ್ತೇವೆ ಎಂದಿದ್ದಾರೆ. ಇದರಿಂದ ಜನರ ನಿರೀಕ್ಷೆ ಹುಸಿಗೊಳಿಸುವ ಸಂಪುಟ ನಿರ್ಣಯ ಆಗಿದೆ. ಐದು ಗ್ಯಾರೆಂಟಿ ಈಡೇರಿಕೆಗೆ 50 ಸಾವಿರ ಕೋಟಿ ಆಗುತ್ತದೆ ಎಂದು ಹೇಳಿದ್ದಾರೆ. ಇದರಿಂದಾಗಿ ಹಣಕಾಸು ಒದಗಿಸಲು ಯಾವುದೇ ಪೂರ್ವ ಆಲೋಚನೆ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಾರಿಯಲ್ಲಿ ಹೋಗುವವರಿಗೆ ಕೊಡಲು ಆಗುತ್ತಾ ಅಂತಾ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದಾರಿಯಲ್ಲಿದ್ದವರು, ಮನೆಯಲ್ಲಿದ್ದವರು ಎಲ್ಲರೂ ಸೇರಿಯೇ ವೋಟ್ ಹಾಕಿದ್ದಾರೆ. ಚುನಾವಣೆಯಲ್ಲಿ ಗೆದ್ದ ಬಳಿಕ ಈಗ ಮತದಾರರಿಗೆ ಎಷ್ಟು ಗೌರವ ಕೊಡುತ್ತಿದ್ದಾರೆ ಎಂದು ಗೊತ್ತಾಗುತ್ತಿದೆ. ಕಾಂಗ್ರೆಸ್ ‌ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದರು.

ಕಾಂಗ್ರೆಸ್ ಮನಸ್ಸು ‌ಮಾಡಿದರೆ ನಾಳೆಯೇ 2000 ರೂ ಹಾಕಬಹುದು. ಬಿಪಿಎಲ್ ಕಾರ್ಡ್ ದಾರರ ಬಗ್ಗೆ ರಾಜ್ಯ ಸರ್ಕಾರದ ಬಳಿ ಈಗಾಗಲೇ ಮಾಹಿತಿ ಇದೆ. ಮನಸ್ಸಿದ್ದರೆ ಮಾತ್ರ ಮಾರ್ಗ ಎಂದ ಮಾಜಿ ಸಿಎಂ, ವಿದ್ಯುತ್ ಉಚಿತ ನೀಡಲು ಕುಂಟು ನೆಪ ಹೇಳುತ್ತಿದ್ದಾರೆ. ಈ ವರ್ಷ ಪಾಸಾದ ಪದವೀಧರರಿಗೆ ಭತ್ಯೆ ಅಂತ ಹೇಳಿದ್ದಾರೆ. ನಿಜವಾದ ಕಷ್ಟದಲ್ಲಿರುವ ನಿರುದ್ಯೋಗಿಗಳಿಗೆ ಸಹಾಯ ಮಾಡುವ ಉದ್ದೇಶ ಇವರಿಗಿಲ್ಲ ಎಂದರು.

ನಮ್ಮ‌ ಅವಧಿಯಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಅಂತಾ ಹೇಳಿದ್ದಾರೆ. ಇದಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಉತ್ತರ ಕೊಟ್ಟಿದ್ದೇನೆ. ಕೋವಿಡ್ ನಿಂದ ಎಲ್ಲಾ ರಾಜ್ಯದಲ್ಲೂ ಸಾಲ ಹೆಚ್ಚಾಗಿದೆ. ಈಗಲೂ ಕೂಡ ಅವರು ಪ್ರತಿಪಕ್ಷ ನಾಯಕನ ತರಹ ಮಾತಾಡುತ್ತಿದ್ದಾರೆ.ಈಗ ಅವರಿಗೆ ಜವಾಬ್ದಾರಿ ಇದೆ. ಇದು ಕೇವಲ ಘೋಷಣೆ ಇರುವ ಗ್ಯಾರಂಟಿ. ಮುಂದಿನ ಸಚಿವ ಸಂಪುಟದವರೆಗೆ ನಾವು ಕಾಯೋಣ. ಏನು ಹೇಳಿದ್ದಾರೆ, ಏನು ಮಾಡುತ್ತಾರೆ ಅಂತಾ ನೋಡೋಣ ಎಂದರು.

ಇಡೀ ದೇಶದಲ್ಲಿ ಜಿಎಸ್ ಟಿ ಆದಾಯದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರ ಸಬ್ ಅರ್ಬನ್, ಮೆಟ್ರೋ, ರೈಲ್ವೆಗೆ ಅನುದಾನ ಕೊಡುತ್ತಿದೆ. ಅರ್ಧ ಮಾಹಿತಿ ಹೇಳಿ ಅರ್ಧ ಮಾಹಿತಿ ಮುಚ್ಚಿಡುವ ಕೆಲಸ‌ ಸಿಎಂ ಮಾಡಿದ್ದಾರೆ. ವಿಧಾನಸಭೆಯಲ್ಲಿ ನಾನು ಇದರ ಸಂಪೂರ್ಣ ವಿವರ ಕೊಡಲು ಸಿದ್ದನಿದ್ದೇನೆ. ನಾವು ಧ್ವನಿ ಎತ್ತಲು ಆರಂಭ ಮಾಡಿದ್ದೇವೆ ಎಂದರು.

ನಾವು ಆದಾಯ ಹೆಚ್ಚು ಮಾಡಲು ಏನೆಲ್ಲಾ ಪ್ರಯತ್ನ ಮಾಡಿದ್ದೇವೆ ಅಂತಾ ನಮ್ಮ‌ ಬಜೆಟ್ ನಲ್ಲಿ ಇದೆ. ಗ್ಯಾರಂಟಿ ಘೋಷಣೆಗಳ 50 ಸಾವಿರ ಕೋಟಿ ಸಣ್ಣ ಮೊತ್ತವೇ ಎಂದು ಪ್ರಶ್ನೆ ಮಾಡಿದ ಮಾಜಿ ಸಿಎಂ, ಸಿದ್ದರಾಮಯ್ಯ ಕಾಲದಲ್ಲಿ ಮಾಡಿದ ಸಾಲದ ಹತ್ತು ವರ್ಷ ಬಡ್ಡಿ ಕಟ್ಟುವುದೇ ಇತ್ತು. ಈಗ ಅಸಲು ಕಟ್ಟುವ ಕಾಲ ಬಂದಿದೆ. ನಮ್ಮ ಬಜೆಟ್ ಮರು ಹಂಚಿಕೆ ಮಾಡುವ ಅಧಿಕಾರ ಅವರಿಗೆ ಇದೆ, ಮಾಡಲಿ. ಗ್ಯಾರಂಟಿಗಳಿಗೆ ಖಂಡಿತ ಷರತ್ತು ವಿಧಿಸುವ ಕೆಲಸ ಮಾಡುತ್ತಾರೆ. ಅದರ ಬಗ್ಗೆ ಜನ ತೀರ್ಮಾನ ಮಾಡಲಿ. ನಂತರ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದರು.

ನಾಳೆ ಬಿಜೆಪಿ ಶಾಸಕಾಂಗ ಸಭೆ: ನಾಳೆ ಬಿಜೆಪಿ ಜಿಲ್ಲಾ ಮುಖಂಡರ ಸಭೆ ಇದೆ. ಈ ಸಭೆಯ ಬಳಿಕ ಶಾಸಕಾಂಗ ಸಭೆ ನಿರ್ಧಾರ ಮಾಡುತ್ತೇವೆ. ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಾನು ಇನ್ನೂ ಏನೂ ಚಿಂತನೆ ಮಾಡಿಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!