ದೊಡ್ಡಬಳ್ಳಾಪುರ, (ಮೇ.20): ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದಿದ್ದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ 8 ಮಂದಿ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ.
ಹತ್ತು ವರ್ಷಗಳ ನಂತರ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಈ ಹಿಂದೆ ಇದೇ ವೇದಿಕೆಯಲ್ಲಿಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡಬಳ್ಳಾಪುರ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸಂಭ್ರಮಾಚರಣೆ ನಡೆಸಿದರು.
ನಗರದ ಸಿದ್ದಲಿಂಗಯ್ಯ ವೃತ್ತ, ತಾಲೂಕು ಕಚೇರಿ ವೃತ್ತ, ದೊಡ್ಡಬೆಳವಂಗಲ ಸೇರಿದಂತೆ ಅನೇಕ ಕಡೆಗಳಲ್ಲಿ ಪಟಾಕಿ ಹೊಡೆದು ಜಯಘೋಷ ಕೂಗಿದ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….