ಬೆಂಗಳೂರು, (ಮೇ.20): ರಾಜ್ಯದ ಜನರಿಗೆ ನೀಡಿರುವ 5 ಗ್ಯಾರಂಟಿಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ.
ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗದಂತೆ ಭರವಸೆಗಳನ್ನು ಜಾರಿ ಮಾಡುತ್ತೇವೆ ಎಂದರು.
ಸದ್ಯ ಎಲ್ಲ ಗ್ಯಾರಂಟಿಗಳಿಗೆ ಸಚಿವ ಸಂಪುಟ ತಾತ್ವಿಕವಾಗಿ ಮಾತ್ರ ಒಪ್ಪಿಗೆ ನೀಡಿದೆ. ಮುಂದಿನ ಸಚಿವ ಸಂಪುಟ ಸಭೆ ಬಳಿಕ ಅಧಿಕೃತವಾಗಿ ಜಾರಿ ಮಾಡುತ್ತೇವೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….