ಬೆಂಗಳೂರು, (ಮೇ.21): ಇಂದು ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಹಲವೆಡೆ ಅವಾಂತರ ಸೃಷ್ಟಿಯಾಗಿದೆ.
ತಾಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದಲ್ಲಿನ ಮನೆಗಳ ಮೇಲ್ಚಾವಣಿಯ ಸೀಟುಗಳು ಹಾರಿ ಹೋಗಿದೆ. ಇದರಿಂದ ಮಳೆಯ ನೀರೆಲ್ಲ ಮನೆಯೊಳಗೆ ನುಗ್ಗಿ ವಸ್ತುಗಳಿಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಂಕೆ ಬಚ್ಚಹಳ್ಳಿ ಗ್ರಾಮದ ಕಾಂತರಾಜು, ಪ್ರಭಾಕರ್, ಮುನಿರಾಜು ಎಂಬುವವರಿಗೆ ಸೇರಿದ ಮನೆಗಳ ಶೀಟುಗಳು ಹಾರಿ ಹೋಗಿವೆ ಎನ್ನಲಾಗಿದೆ.
ಮನೆಯಲ್ಲಿನ ಪಾತ್ರೆ ಸಾಮಾನುಗಳು ನಜ್ಜುಗುಜ್ಜಾಗಿರುವುದು ಕಂಡುಬಂದಿದೆ. ಇದೇ ಗ್ರಾಮದ ಹಾಲಿನ ಡೇರಿ ಬಳಿ ಮರ ನೆಲಕ್ಕುರಳಿ ವಿದ್ಯುತ್ ಲೈನ್ ಮೇಲೆ ಬಿದ್ದಿದ್ದು, ಇದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….