ರಾಜಧಾನಿಯಲ್ಲಿ ಮಳೆಗೆ ಇನ್ಫೋಸಿಸ್ ಉದ್ಯೋಗಿ ಬಲಿ: ಮಳೆ ಮುನ್ಸೂಚನೆ ಇದ್ದರೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, (ಮೇ.21): ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಅವರು ಬಲಿಯಾದ ಘಟನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಅವರು ಬಿಬಿಎಂಪಿ ಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿಯೂ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಹೇಳಿರುವ ಅವರು, ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್  ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!