ಬೆಂಗಳೂರು, (ಮೇ.21): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗೆ ಪುಷ್ಪನಮನ ಸಲ್ಲಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ನಮನ ಸಲ್ಲಿಸಿದರು.
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ, ಭಾರತದ ಡಿಜಿಟಲ್ ಕ್ರಾಂತಿಯ ಹರಿಕಾರ, ದೇಶದ ಐಕ್ಯತೆ – ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಮಾಜಿ ಪ್ರಧಾನಿ, ಭಾರತ ರತ್ನ ‘ರಾಜೀವ್ ಗಾಂಧಿ’ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ ಎಂದಿದೆ.
ಮತ್ತೊಂದೆಡೆ ಇಂದು ಬೆಳಗ್ಗೆ ಎಐಸಿಸಿ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಪುಷ್ಪನಮನ ನಮನ ಸಲ್ಲಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಂದೆಗೆ ಶ್ರದ್ಧಾಂಜಲಿ ಅರ್ಪಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….