ಬೆಂಗಳೂರು, (ಮೇ.21): ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಶುಭ ಹಾರೈಸಿದ್ದಾರೆ. ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್, 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ.
ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….