ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ; ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು, (ಮೇ.23): ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!