ಬೆಂಗಳೂರು, (ಮೇ.24): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅವರಿಂದ ವಿಧಾನಸಭೆಯ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ವಿಧಾನಸಭೆ ಸಭೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರದ ವೇಳೆ ಗೈರು ಹಾಜರಾದವರಿಗೆ ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಪ್ರಮಾಣ ವಚನ ಪಡೆಯದ ಶಾಸಕರು ಇಂದು ನಡೆಯುವ ಸ್ಪೀಕರ್ ಆಯ್ಕೆ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇರುವುದಿಲ್ಲವೆಂದು ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ತಿಳಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….