ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನಿಜಬಣ್ಣ ಒಂದೇ ವಾರದಲ್ಲಿ ಬಯಲು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, (ಮೇ.24): ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ನುಡಿದಂತೆ ನಡೆಯಬೇಕು, ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ನಾನು ಕೊಟ್ಟ ಮಾತು ತಪ್ಪಲ್ಲ, ಮಾತಿಗೆ ತಪ್ಪಿದರೆ ಒಂದು ಕ್ಷಣವೂ ಅಧಿಕಾರದಲ್ಲಿ ಇರಲ್ಲ ಅಂದಿದ್ದಾರೆ ಅವರು. ಅವರೆಲ್ಲ ಮಾಡಿರುವ ಭಾಷಣಗಳನ್ನು ಜನರು ನೋಡಿದ್ದಾರೆ, ಕೇಳಿದ್ದಾರೆ. ಎಲ್ಲರಿಗೂ ವಿದ್ಯುತ್ ಉಚಿತ ಎಂದು ಭಾಷಣದಲ್ಲಿ ಹೇಳಿದ್ದರು. ಈಗ ನೋಡಿದರೆ, ಅದಕ್ಕೆ ಮಾರ್ಗಸೂಚಿ ರಚನೆ ಆಗಬೇಕು ಎನ್ನುತ್ತಿದ್ದಾರೆ. ಅವತ್ತು ವೀರಾವೇಶದಲ್ಲಿ ಮಾತಾಡಿ ಚಪ್ಪಾಳೆ ಗಿಟ್ಟಿಸಿಕೊಂಡರು. ಒಂದೇ ವಾರದಲ್ಲಿ ಅವರ ನಿಜವಾದ ಬಣ್ಣ ಬಯಲಾಗ್ತಿದೆ. ಇವರು ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಕಾದು ನೋಡೋಣ. ನಂತರ ಜನತೆಯ ಜತೆ ಸೇರಿ ಯಾವ ರೀತಿ ಹೋರಾಟ ಮಾಡಬೇಕೋ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲಾ ಗ್ಯಾರಂಟಿ ಯೋಜನೆ ಕೊಡಕ್ಕಾಗಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಒಪ್ಪಲಾಗದು. ಮೊದಲು ಭಾಷಣ ಏನು ಮಾಡಿದ್ದರಲ್ಲ, ಅವತ್ತು ಭರವಸೆ ಕೊಡಬೇಕಾದಾಗಾ ನಿಮಗೆ ತಲೆ ಇರಲಿಲ್ಲವಾ. ಈಗ ಮತ ಕೊಟ್ಟವರೆಲ್ಲಾ ಹಾದಿಬೀದಿಯವರು ಆಗಿಬಿಟ್ರಾ‌.? ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಎರಡು ದಿನಗಳ ಮಳೆ ಬೆಂಗಳೂರಿನ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎನ್ನುವುದನ್ನು ನಾನು ಬಲ್ಲೆ. ಕಳೆದ ಹದಿನೈದು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಆಡಳಿತ ನಡೆಸಿವೆ. ಬೆಂಗಳೂರು ಈಗ ಪ್ರತಿ ಮಳೆಗಾಲದಲ್ಲಿಯೂ ಈ ಸಮಸ್ಯೆಗಳು ಆಗ್ತಿವೆ. ಇದರ ಬಗ್ಗೆ ರಾಷ್ಟ್ರೀಯ ಪಕ್ಷಗಳಿಗೆ ಚಿಂತೆ ಇದೆಯಾ‌? ಎಂದು ಅವರು ಕಿಡಿ ಕಾರಿದರು.

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸಿಕ್ಕಿದ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಸಭೆ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಇದೇ ವೇಳೆ ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

ಪಕ್ಷದಲ್ಲಿ ಮಾಡಬೇಕಿರುವ ಬದಲಾವಣೆಗಳು ಹಾಗೂ ತರಬೇಕಿರುವ ಸುಧಾರಣೆಗಳ ಬಗ್ಗೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಇದರಲ್ಲಿ ಯಾವ ಮುಚ್ಚುಮರೆ ಇಲ್ಲ. ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದೆವು. ಪಂಚರತ್ನ ರಥಯಾತ್ರೆಗೂ ದೊಡ್ಡ ಸಂಖ್ಯೆಯಲ್ಲಿ ಜನರು  ಸೇರಿದ್ದರು. ಆದರೆ, ಫಲಿತಾಂಶ ನಮಗೆ ಅತೀವ ನಿರಾಶೆ ಉಂಟು ಮಾಡಿದೆ ಎಂದರು ಅವರು.

ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಮಹತ್ವದ ಬದಲಾವಣೆ ಮಾಡಲಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನವೆಂಬರ್ ನಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ನಾನು ರಾಜಕೀಯದಲ್ಲಿ ಬೆಳವಣಿಗೆಗಳು ಆಗುತ್ತವೆ ಎಂದಿದ್ದೆ ಅಷ್ಟೇ‌. ಸರ್ಕಾರ ಹೋಗುತ್ತೆ ಅಂತಾ ಹೇಳಿದ್ದೆನಾ‌? ಎಂದು ಮರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!