ದೊಡ್ಡಬಳ್ಳಾಪುರ, (ಮೇ.24): ತಾಲೂಕಿನ ಸಾಸಲು ಹೋಬಳಿಯ ಆರೂಢಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಬುಧವಾರ ಸಂಜೆ ಏಕಾಏಕಿ ಸುರಿದ ಬಾರಿ ಗಾಳಿ ಮಿಶ್ರಿತ ಆಲಿಕಲ್ಲು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ.
ಬುಧವಾರ ಮಧ್ಯಾಹ್ನ ನಾಲ್ಕು ಗಂಟೆಯ ಸುಮಾರಿಗೆ ಆರ್ಭಟಿಸಿದ ಆಲಿಕಲ್ಲು ಮಳೆ ಹಾಗೂ 50-60 ಕಿಮೀ ವೇಗದಲ್ಲಿ ಬೀಸಿದ ಗಾಳಿಯಿಂದಾಗಿ ಅನೇಕ ಬೃಹತ್ ಮರಗಳು, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿಬಿದ್ದಿವೆ.
ವಿದ್ಯುತ್ ಕಂಬಗಳು ಉರುಳಿ ಬಿದ್ದ ಪರಿಣಾಮ ಈ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದು, ಬೆಸ್ಕಾಂ ಸಿಬ್ಬಂದಿಗಳು ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….