ನೂತನ ಸಭಾಧ್ಯಕ್ಷರನ್ನು ಅಭಿನಂದಿಸಿದ ಸಿಎಂ: ಯು.ಟಿ ಖಾದರ್ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಹಾರೈಕೆ

ಬೆಂಗಳೂರು, (ಮೇ 24): ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ  ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿದುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವ, ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಿಸಿದರು.

ಅವರು ಇಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಮಾತನಾಡಿದರು.  

ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ ವಿಶ್ವಾಸವಿದೆ.  ಅವರು ಬಹಳ ತಾಳ್ಮೆ ಇರುವ ವ್ಯಕ್ತಿ.  ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದಸನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ ಎಂದರಲ್ಲದೇ ಹೊಸದಾಗಿ ಆರಿಸಿಬಂದ ಸದಸ್ಯರಿಗೆ ಅಭಿನಂದಿಸಿದರು. ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿಯೂ ತಿಳಿಸಿದರು.

ಉತ್ಸಾಹಿ, ಸಕ್ರಿಯ ರಾಜಕಾರಣಿ: ರಾಜಕಾರಣದ ಕುಟುಂಬದಿಂದ ಬಂದಿರುವ ಖಾದರ್ ಅವರು ತಮ್ಮ ತಂದೆಯ ನಿಧನದ ನಂತರ ಉಳ್ಳಾಲ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದವರು. ಅತ್ಯಂತ ಉತ್ಸಾಹಿ, ಸಕ್ರಿಯ ರಾಜಕಾರಣಿಯಾದ ಖಾದರದದ ಅವರು, ಶಾಸಕರು ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದು, 2018 ರಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಸದನವೀರ ಪ್ರಶಸ್ತಿಯೂ ದೊರೆತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಯು.ಟಿ.ಖಾದರ್ ಅವರು ಮಾದರಿ ಶಾಕಸರಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಉಪವಿರೋಧಪಕ್ಷದ ನಾಯಕರಾಗಿ ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದವರು. ಜಾತ್ಯಾತೀತ ಮನೋಭಾವ ಉಳ್ಳವರು ಎಂದರು.

ವಿಧಾನಸಭೆಯ ಗುಣಮಟ್ಟ ಉತ್ತಮವಾಗಲಿ: ಸಭಾಧ್ಯಕ್ಷರಾದವರು ಪಕ್ಷಾತೀತವಾಗಿ ಕೆಲಸ ಆಡಬೇಕೆಂಬ ನಿರೀಕ್ಷೆಯನ್ನು ಎಲ್ಲ ಸದಸ್ಯರೂ ಬಯಸುತ್ತಾರೆ. ವಿಧಾನಸಭೆ ಈ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕು.  ಇತ್ತೀಚಿನ ದಿನಗಳಲ್ಲಿ ವಿಧಾನಸಭೆಯ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಭಾವನೆ ಅನೇಕರಲ್ಲಿದೆ. ಆ ಭಾವನೆ ಹೋಗಲಾಡಿಸುವ ಕೆಲಸವನ್ನು ಮಾಡಬೇಕಿದೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಇಲ್ಲಿ ಏಳು ಕೊಟಿ ಕನ್ನಡಿಗರ ಸಮಸ್ಯೆಗಳನ್ನು ಚರ್ಚೆ ಮಾಡಬೇಕು.

ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಚರ್ಚೆಯಾಗಬೇಕು. ಸದಸನದ  ಅಧ್ಯಕ್ಷರ ಸ್ಥಾನಕ್ಕೆ ಪ್ರಜಾಪ್ರಭುತ್ವದಲ್ಲಿ ಮಹತ್ವದ ಸ್ಥಾನವಿದೆ. ಸದಸನದ ಚರ್ಚೆಯಲ್ಲಿ ಅನೇಕ ವಿಚಾರಗಳು ಬರುತ್ತವೆ. ಚರ್ಚೆಯಲ್ಲಿ ಭಾಗವಹಿಸುವಾಗ ಪದಬಳಕೆಯಲ್ಲಿ ಬಹಳ ಎಚ್ಛರಿಕೆ ವಹಿಸಬೇಕು. ಅಸಂವಿಧಾನಾತ್ಮಕ ಪದಬಳಕೆಗೆ ಅವಕಾಶವಿರಬಾರದು. ರಚನಾತ್ಮಾಕವಾದ ಸಲಹೆಗಳನ್ನು ನೀಡಲು ಅವಕಾಶ ಹಾಗೂ ಹಕ್ಕುಗಳಿವೆ  ಎಂದರು.

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕ ವಿಧಾನಸಭೆಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ, ಜನರ ರಕ್ಷಣೆ, ಕಾನೂನು ಸುವ್ಯವಸ್ಥೆ ಇರಬೇಕು. ಕಾನೂನು ಸುವ್ಯವಸ್ಥೆ ಇಲ್ಲದಿದ್ಧರೆ ಬಂಡವಾಳ ಹೂಡಿಕೆಯಾಗುವುದಿಲ್ಲ.

ಬಂಡವಾಳ ಹೂಡಿಕೆಯಾಗದಿದ್ದರೆ, ಉದ್ಯೋಗ ಸೃಷ್ಟಿಯಾಗುವುದಿಲ್ಲ. ಉದ್ಯೋಗ ಸೃಷ್ಟಿಯಾಗದಿದ್ದರೆ ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ. ರಾಜ್ಯದ ಅಭಿವೃದ್ಧಿ, ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಆದ್ದರಿಂದ  ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕವಾಗಿದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!