ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ: ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ

ಬೆಂಗಳೂರು, (ಮೇ28): ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. 

ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. 

ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ ಎಂದು ಸೂಚಿಸಿದ್ದಾರೆ.

ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾಗಾಂಧಿ,  ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ದೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲಾ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ.

ನಾವು ನೀಡಿರುವ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು. 

ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನೀವೆಲ್ಲಾ ಸಕ್ರಿಯರಾಗಿ. ವಿರೋಧಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈ ಹಿಡಿದಿದ್ದಾರೆ. ಈಗ ನಾವು ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕಿದೆ ಎಂದು ಸಚಿವರಿಗೆ ಸೂಚಿಸಿದ್ದಾರೆ.

ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಇದನ್ನು ನಾವು ಮರೆಯಬಾರದು. ಹೀಗಾಗಿ ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು. ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು ಎಂದು ಮುಖ್ಯಮಂತ್ರಿಗಳು ಎಲ್ಲಾ ಸಚಿವರಿಗೂ ಟಾರ್ಗೆಟ್ ನೀಡಿ ಶುಭ ಹಾರೈಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!