ಭುವನೇಶ್ವರ್, (ಜೂ.03): ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣ ಬಳಿ ಮೂರು ರೈಲುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 238ಕ್ಕೆ ಏರಿದೆ. 900 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ.
ಈ ಕುರಿತು ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೇನಾ ಮಾಹಿತಿ ನೀಡಿ, ‘ತ್ವರಿತವಾಗಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ’ ಎಂದಿದ್ದಾರೆ.
ಶುಕ್ರವಾರ ಸಂಜೆ 7.20 ರ ಸುಮಾರು ಈ ದುರ್ಘಟನೆ ನಡೆದಿದೆ. ರೈಲು ದುರಂತದ ಬಗ್ಗೆ ಪ್ರಧಾನಿ ಮೋದಿ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಕೆಲ ಮೂಲಗಳ ಪ್ರಕಾರ ಸಾವಿನ ಸಂಖ್ಯೆ 300ರ ಸನಿಹ ಹೋಗಿದ್ದು ಅಧಿಕೃತವಾಗಿ ಘೋಷಣೆ ಆಗಿಲ್ಲ. ಇದು ಒಡಿಶಾದಲ್ಲಿ ಅತಿದೊಡ್ಡ ರೈಲು ದುರಂತ ಎನ್ನಲಾಗಿದೆ.
ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರೈಲು ದುರಂತದಲ್ಲಿ ಸುಮಾರು 300 ಜನರು ಮರಣ ಅಸುನೀಗಿರುವುದು ದುರದೃಷ್ಟಕರ. ಅಪಘಾತದ ಸುದ್ದಿಯಿಂದ ಅತೀವ ನೋವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ರೈಲ್ವೆ ಇಲಾಖೆಯವರು ಅಪಘಾತದ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ. ಅಪಘಾತದಲ್ಲಿ ಕನ್ನಡಿಗರ ಸಾವು ನೋವು ಬಗ್ಗೆ ಯಾವುದೇ ಮಾಹಿತಿ ಬಂದಿರುವುದಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆಕುಕೊಂಡು, ಕನ್ನಡಿಗರ ರಕ್ಷಣೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ಅವರು ತೆರಳಿದ್ದಾರೆ ಎಂದು ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….