ದೊಡ್ಡಬಳ್ಳಾಪುರ, (ಜೂ.03): ಲಾರಿಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕನೋರ್ವ ಗಂಬೀರವಾಗಿ ಗಾಯಗೊಂಡಿರುವ ಘಟನೆ ಡಿ ಕ್ರಾಸ್ ಬಳಿ ಸಂಭವಿಸಿದೆ.
ಶನಿವಾರ ಬೆಳಗ್ಗೆ ಜಾವ ಘಟನೆ ನಡೆದಿದ್ದು, ಮುಂಭಾಗದಲ್ಲಿ ಸಾಗುತ್ತಿದ್ದ ಕಂಟೈನರ್‌ಗೆ ಹಿಂಭಾಗದಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ತಮಿಳುನಾಡು ಮೂಲದ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ಅಪಘಾತದಲ್ಲಿ ಲಾರಿಯ ಕ್ಲೀನರ್ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡ ಚಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….