ದೊಡ್ಡಬಳ್ಳಾಪುರ, (ಜೂ.03): ಬುಲೆಟ್ ಹಾಗೂ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವೃದ್ಧನೋರ್ವ ಗಂಭಿರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕುರುಬರಹಳ್ಳಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಘಟನೆಯಲ್ಲಿ ಎಕ್ಸಲ್ ದ್ವಿಚಕ್ರ ವಾಹನದ ಸವಾರ ಕುರುಬರಹಳ್ಳಿ ನಿವಾಸಿ ಪಿಳ್ಳಪ್ಪ (65 ವರ್ಷ) ತೀವ್ರವಾಗಿ ಗಾಯಗೊಂಡಿದ್ದು, ನಗರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದೇ ವೇಳೆ ಬುಲೆಟ್ ಸವಾರನಿಗೂ ಪೆಟ್ಟಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….