ಶಕ್ತಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ: ಸಮಾಜದ ಅಭಿವೃದ್ಧಿಗೆ ಮಹಿಳೆಯರು ಪುರುಷರಷ್ಟೇ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ

ಬೆಂಗಳೂರು, (ಜೂ.12): ಯಾವುದೇ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಪುರುಷರಷ್ಟೇ ಮಹಿಳೆಯರೂ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ  ನೀಡಿ ಮಾತನಾಡಿದರು.  

ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ  ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.  

ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಸಾರ್ವಜನಿಕ ಕ್ಷೇತ್ರಗಳಲ್ಲಿ  ಪಾಲ್ಗೊಳ್ಳುತ್ತಿದ್ದಾರೆ: ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣವನ್ನು ತಿಳಿಸಿದ ಮುಖ್ಯಮಂತ್ರಿಗಳು, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೀಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು ಪಾಲ್ಗೊಳ್ಳುತ್ತಾರೆ. ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ.  ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ  ಶೇ  24 ಕ್ಕೆ ಇಳಿದಿದೆ ಎಂದರು.  ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ.

ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಎಲ್ಲಾ ಜಾತಿ, ಧರ್ಮದ ಬಡವರಿಗೆ ಆರ್ಥಿಕ, ಸಮಾಜಿಕವಾದ ಶಕ್ತಿ ತುಂಬುವ ಕೆಲಸ: ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಮಾಜಿಕವಾದ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ.

ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. 59000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ ಎಂದರು.

ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು: 10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಕಾರ್ಡುದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ ಎಂದರು.  

ಯೋಜನೆಯ ಲಾಭ ಪಡೆಯಬೇಕು: ಹೆಣ್ಣುಮಕ್ಕಳು ಇಂದು ಒಂದು ಗಂಟೆಯಿಂದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ   ಅನ್ವಯವಾಗುತ್ತದೆ ಎಂದರಲ್ಲದೆ  ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. 

ಇದೇ ವೇಳೆ ಗುಲಾಬಿ ಬಣ್ಣದ ಸ್ಮಾರ್ಟ್, ಶಕ್ತಿ ಯೋಜನೆಯ ಲಾಂಛನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ. ವಿಜಯೇಂದ್ರ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ

[ccc_my_favorite_select_button post_id="120922"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]