ದೊಡ್ಡಬಳ್ಳಾಪುರ, (ಜೂ.12): ಖ್ಯಾತ ನಟ ಪ್ರಭುದೇವ ಅವರು ಸೋಮವಾರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದೇವಾಲಯಕ್ಕೆ ಬಂದ ಪ್ರಭುದೇವ ಅವರನ್ನು ನೋಡಲು ದೇವಾಲಯದ ಹೊರಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಅಲ್ಲದೆ ಪ್ರಭುದೇವ ಅವರೊಂದಿಗೆ ಸೆಲ್ಫಿ ಪಡೆದು ಸಂಭ್ರಮಿಸಿದರು.
ಪ್ರಭುದೇವ ಅವರಿಗೆ ದೇವಾಲಯದ ವತಿಯಿಂದ ಸನ್ಮಾನಿಸಿ ಪ್ರಸಾದ ವಿತರಿಸಲಾಯಿತು.
ಕರ್ನಾಟಕ ಮೂಲದ ತಮಿಳು ಚಿತ್ರರಂಗದ ಖ್ಯಾತ ನಟರಾದ ಪ್ರಭುದೇವ ಒಬ್ಬ ಭಾರತೀಯ ನೃತ್ಯ ಸಂಯೋಜಕ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಮತ್ತು ನಟ, ಇವರು ಪ್ರಧಾನವಾಗಿ ತಮಿಳು, ಹಿಂದಿ, ತೆಲುಗು ಮತ್ತು ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. 32 ವರ್ಷಗಳ ವೃತ್ತಿಜೀವನದಲ್ಲಿ, ಅವರು ವ್ಯಾಪಕ ಶ್ರೇಣಿಯ ನೃತ್ಯ ಶೈಲಿಗಳನ್ನು ಪ್ರದರ್ಶಿಸಿದ್ದಾರೆ ಮತ್ತು ವಿನ್ಯಾಸಗೊಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….