ಹವಾಮಾನ ವರದಿ: ಬೆಂ.ಗ್ರಾ.ಜಿಲ್ಲೆ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, (ಜೂ.12): ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮುಂಗಾರು ಕರ್ನಾಟಕಕ್ಕೆ ಇಂದು ಪ್ರವೇಶಿಸುವ ಸಾಧ್ಯತೆ ಇದ್ದು, ಹೀಗಾಗಿ 5 ದಿನ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!