ದೊಡ್ಡಬಳ್ಳಾಪುರ, (ಜೂ.19): ನೂತನ ಉಪವಿಭಾಗಾಧಿಕಾರಿ ಶ್ರೀನಿವಾಸ್ ಅವರು ಸೋಮವಾರ ಸಂಜೆ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಾಲಯದ ಸಿಬ್ಬಂದಿ ಹಾಗೂ ಅರ್ಚಕರು ಶ್ರೀನಿವಾಸ್ ಅವರಿಗೆ ಶುಭಾಶಯ ಕೊರಿ, ಪ್ರಸಾದ ವಿತರಿಸಿದರು.
ಇಂದು ಬೆಳಗ್ಗೆ ಉಪ ವಿಭಾಗಾಧಿಕಾರಿ ಯಾಗಿದ್ದ ತೇಜಸ್ ಕುಮಾರ್ ಅವರ ಸ್ಥಾನಕ್ಕೆ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿದ್ದ ಎಂ.ಶ್ರೀನಿವಾಸ್ ಅವರನ್ನು ನೇಮಿಸಲಾಗಿತ್ತು
ಕೆಎಎಸ್ (ಕಿರಿಯ ಶ್ರೇಣಿ ವೃಂದದ ನಾಲ್ವರು ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….