ದೊಡ್ಡಬಳ್ಳಾಪುರ, (ಜೂ.19): ನೂತನ ಉಪವಿಭಾಗಾಧಿಕಾರಿಯಾಗಿ ಎಂ.ಶ್ರೀನಿವಾಸ್ ಅವರು ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನೂತನ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಅವರಿಗೆ ಪುಷ್ಪಗುಚ್ಛ ನೀಡಿ ಸಿಬ್ಬಂದಿಗಳು ಅಭಿನಂದಿಸಿದರು.
ಉಪವಿಭಾಗಾಧಿಕಾರಿಯಾಗಿದ್ದ ತೇಜಸ್ ಕುಮಾರ್ ಅವರನ್ನು ಇಂದು ಮಧ್ಯಾಹ್ನವಷ್ಟೇ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದ್ದು, ಕೆಲವೆ ಗಂಟೆಗಳಲ್ಲಿ ಶ್ರೀನಿವಾಸ್ ಅವರು ಅಧಿಕಾರ ಸ್ವೀಕರಿಸಿ ಅಚ್ಚರಿ ಮೂಡಿಸಿದ್ದಾರೆ.
ಎಂ.ಶ್ರೀನಿವಾಸ್ ಅವರು ಈ ಹಿಂದೆ ನೆಲಮಂಗಲ ತಾಲೂಕಿನ ತಹಶೀಲ್ದಾರ್ ಸಹ ಆಗಿ ಕಾರ್ಯನಿರ್ವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….