ದೊಡ್ಡಬಳ್ಳಾಪುರ, (ಜೂ.19): ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ನಿಗದಿಪಡಿಸುವ ಸಭೆ ಜೂನ್ 22 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಬೆಸೆಂಟ್ ಪಾರ್ಕ್ ರಸ್ತೆಯಲ್ಲಿನ ಎನ್.ಎಸ್.ಕನ್ನೆಷನ್ ಹಾಲ್‌ನಲ್ಲಿ ನಡೆಯಲಿದೆ.
ತಾಲೂಕಿನಲ್ಲಿ 28 ಪಂಚಾಯಿತಿಗಳಿದ್ದು, 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಯಾಗಿ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಅಯ್ಕೆಯಾಗಲಿದ್ದಾರೆ. ಅರಳುಮಲ್ಲಿಗೆ, ಮಜರಾಹೊಸಹಳ್ಳಿ ಹಾಗೂ ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ತಡವಾಗಿ ಚುನಾವಣೆ ನಡೆದಿದ್ದ ಕಾರಣ ಇಲ್ಲಿನ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮುಕ್ತಾಯವಾಗಿಲ್ಲ. ಆದರೆ ಮೀಸಲಾತಿ ನಿಗದಿ ಪ್ರಕ್ರಿಯೆ ಮಾತ್ರ ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಒಮ್ಮೆಲೆಯೇ ನಡೆಯಲಿದೆ.
ಮೀಸಲಾತಿ ನಿಗದಿಯಲ್ಲಿ ಯಾವುದೇ ರಾಜಕೀಯ ಒತ್ತಡ ನಡೆಸುವ ಉದಶದಿಂದ `ಎನ್‌ಐಸಿ (ರಾಷ್ಟ್ರೀಯ ವತಿಯಿಂದ ಅಭಿವೃದ್ಧಿಪಡಿಸಲಾಗಿ ಪ್ರಕ್ರಿಯೆ ನಡೆಯಲಿದೆ. ಈ ಹಿಂದೆ ನಿಗದಿಯಾಗಿದ್ದ ಮೀಸಲಾತಿಯನ್ನು ತಂತ್ರಾಂಶದಲ್ಲಿ ಅಳವಡಿಸಲಾಗಿ- ದ್ದು, ರೋಸ್ಟರ್ ಪದ್ಧತಿ ಪ್ರಕಾರ ಈಗ ಯಾವ ಮೀಸಲಾತಿ ನಿಗದಿಯಾಗಬೇಕಿದೆ ಎನ್ನುವುದನ್ನು ತೋರಿಸಲಿದೆ. ಈ ಹಿಂದೆ ನಿಗದಿಯಾಗಿರುವ ಮೀಸಲಾತಿಗಳನ್ನು ಎಲ್ಲರ ಸಮ್ಮುಖದಲ್ಲಿಯೇ ಓದಿ ಹೇಳಲಾಗುತ್ತದೆ. ಹಾಗಾಗಿ ಮೀಸಲಾತಿ ಆಗುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ನಡೆದ ನಂತರ ಕ್ಷೇತ್ರದಲ್ಲಿ ಬದಲಾದ ರಾಜಕೀಯ ಸನ್ನಿವೇಶದ ಪ್ರಭಾವ ಸಹಜವಾಗಿಯೇ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮೇಲು ಬೀರಲಿದೆ. ಎಲ್ಲ ರಾಜಕೀಯ ಪಕ್ಷಗಳು ಗ್ರಾಮ ಪಂಚಾಯಿತಿ ಹಂತದಿಂದಲೇ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತವೆ. ಹೀಗಾಗಿ ನಮ್ಮ ಪಕ್ಷದ
ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷರಾಗಬೇಕು. ಎನ್ನುವ ಹಂಬಲವು ಸಹಜವಾಗಿಯೇ ಕೆಲಸ ಮಾಡಲಿದೆ. ಗ್ರಾಮ ಪಂಚಾಯಿತಿ ಸದಸ್ಯರ ಆಯ್ಕೆಗೆ ಯಾವುದೇ ಪಕ್ಷದ ಅಧಿಕೃತ ಚಿಹ್ನೆ ಇಲ್ಲವಾದರೂ ಕ್ಷೇತ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷದ ಪರವಾಗಿ ಹೆಚ್ಚಿನ ಸದಸ್ಯರು ಗುರುತಿಸಿಕೊಳ್ಳಲು ಇಚ್ಚಿಸುತ್ತಾರೆ. ಏಕೆಂದರೆ ಪಂಚಾಯಿತಿಗೆ ಹೆಚ್ಚಿನ ಅನುದಾನ, ಕಾಮಗಾರಿ ಪಡೆಯಲು ಸಹಾಯವಾಗುತ್ತದೆ ಎಂಬ ಕಾರಣಕ್ಕೆ. ಆದರೆ, ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿವೆ.
ಈಗ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಯಾವ ರೀತಿ ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಗಮನ ವಹಿಸಲಿದೆ ಎನ್ನುವ ಕುತೂಹಲ ನೂತನವಾಗಿ ಆಯ್ಕೆಯಾಗುವ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಮತದಾರರಲ್ಲಿ ಮೂಡಿದ. ಹಾಗೆಯೇ ಯಾವ ಪಕ್ಷದಲ್ಲಿ ಗುರುತಿಸಿಕೊಂಡರೆ ನಮ್ಮ ಪಂಚಾಯಿತಿಗೆ ಹೆಚ್ಚಿನ ಅನುದಾನ, ಕಾಮಗಾರಿಗಳನ್ನು ಪಡೆಯಲು ಸಾಧ್ಯವಾಗಲಿದೆ ಎನ್ನುವ ಲೆಕ್ಕಾಚಾರಗಳು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಕಾಡುತ್ತಿದೆ.
ಯಾವ ರೀತಿ ಅನುದಾನ ಮಂಜೂರು: ನಿಗದಿಯಂತೆ ಪ್ರತಿ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಬರುವ ಅನುದಾನ ಹೊರತುಪಡಿಸಿ ಹೆಚ್ಚಿನ ಅನುದಾನ, ಕಾಮಗಾರಿಗಳನ್ನು ಪಡೆಯಲು ಕ್ಷೇತ್ರದ ಶಾಸಕರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸು ಅತ್ಯಗತ್ಯ. ಆದರೆ, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ 2018 ರಿಂದ 2023ರ ಮಾರ್ಚ್ ತಿಂಗಳವರೆಗೆ ಇದ್ದಂತೆಯೇ ಈಗಲೂ ಕ್ಷೇತ್ರದಲ್ಲಿ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಇದ್ದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಿಶೇಷ ಅನುದಾನಗಳು ಮಂಜೂರು ಆಗಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಂತೂ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ರೀತಿ ಸ್ಪಂದಿಸಿಲ್ಲ ಎಂಬುದರ ಬಗ್ಗೆ ದೂರುಗಳಿದ್ದವು. ಹಾಗಾಗಿ ಈ ಬಾರಿ ಯಾವ ರೀತಿ ಅನುದಾನ ಮಂಜೂರು ಆಗುತ್ತದೆ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….