ಬೆಂಗಳೂರು, (ಜೂ.19): ನೋಂದಣಿ ಇಲಾಖೆಯಲ್ಲಿ ಹಲವು ಬದಲಾವಣೆಗಳನ್ನು ತರಲಾಗಿದ್ದು, ರಾಜ್ಯದ 251 ನೋಂದಣಿ ಕಚೇರಿಗಳಲ್ಲಿ ಇಂದು ಸಂಜೆಯೊಳಗೆ ಕಾವೇರಿ -2 ತಂತ್ರಾಂಶ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ನಿಂದ ಕಾವೇರಿ-2 ನೋಂದಣಿ ಪ್ರಕ್ರಿಯೆ ಅಳವಡಿಸಲಾಗಿದೆ.
251 ನೋಂದಣಿ ಕಚೇರಿಗಳಲ್ಲಿ ಇಂದು ಸಂಜೆಯೊಳಗೆ ಕಾವೇರಿ-2 ತಂತ್ರಾಂಶ ಜಾರಿಯಾಗಲಿದೆ. ಎಲ್ಲಾ ದಾಖಲೆಗಳನ್ನು ಕಾವೇರಿ-2 ತಂತ್ರಾಂಶದಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಅನ್ ಲೈನ್ ನಲ್ಲಿ ಮಾಡಬಹುದು.
ನೋಂದಣಿ ಶುಲ್ಕವನ್ನು ಆನ್ ಲೈನ್ ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ಜಮೀನು ಅಕ್ರಮವನ್ನು ತಡೆಯಬಹುದು. ಯಾರದ್ದೋ ಜಮೀನು ಯಾರಿಗೋ ನೋಂದಣಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.
ಇನ್ನೂ ನೋಂದಣಿ ಅಳವಡಿಕೆ ರಾಜ್ಯದ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ಎರಡನೇ ಸ್ಥಾನದಲ್ಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….