ದೊಡ್ಡಬಳ್ಳಾಪುರ, (ಜೂ.23): ತಾಲೂಕಿನ ತಿರುಮಗೊಂಡನಹಳ್ಳಿ – ಗಂಗಸಂದ್ರ ನಡುವಿನ ಕೆರೆ ಏರಿಯಿಂದ ಪಾಲನಜೋಗಿಹಳ್ಳಿಯ ಬಿ.ಹೆಚ್.ಪಬ್ಲಿಕ್ ಶಾಲೆ ಬಸ್ ಉರುಳಿ ಬಿದ್ದ ಘಟನೆಯಲ್ಲಿ ಗಾಯಗೊಂಡ ಮಕ್ಕಳನ್ನು ನಗರದ ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಚಾಲಕನ ಬೇಜವಬ್ದಾರಿ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ವಿಷಯ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಆಸ್ಪತ್ರೆಗೆ ದೌಡಾಯಿಸಿ, ಸ್ಥಳದಲ್ಲಿಯೇ ಮೊಕ್ಕಾಂ ಹೋಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ಘಟನೆಯಲ್ಲಿ ನಂದನ್ (13ವರ್ಷ) ಎಂಬ ವಿದ್ಯಾರ್ಥಿಯ ತಲೆಯಿಂದ ರಕ್ತಸ್ರಾವವಾದ ಕಾರಣ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಯಿತು
ಅಲ್ಲದೆ ತಲೆಗೆ ಪೆಟ್ಟಾಗಿರುವ ಕಾರಣ 24ಗಂಟೆಗಳ ನಿಗಾವಹಿಸಲು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅಪಘಾತದಲ್ಲಿ ಗಾಯಗೊಂಡ ಉಳಿದ ಮಕ್ಕಳನ್ನು ಮನೆಗೆ ಕಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….