ದೊಡ್ಡಬಳ್ಳಾಪುರ, (ಜೂ.23): ತಾಲೂಕಿನ ತಿರುಮಗೊಂಡನಹಳ್ಳಿ – ಗಂಗಸಂದ್ರ ನಡುವಿನ ಕೆರೆ ಏರಿಯಿಂದ ಖಾಸಗಿ ಶಾಲೆ ಉರುಳಿ ಬಿದ್ದ ಘಟನೆಯಲ್ಲಿ ಗಾಯಗೊಂಡ ಮಕ್ಕಳನ್ನು ನಗರದ ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಆಸ್ಪತ್ರೆಗೆ ದೌಡಾಯಿಸಿದ್ದು, ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಘಟನೆಯಲ್ಲಿ ನಂದನ್ (13ವರ್ಷ) ಎಂಬ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೋರ್ವ ವಿದ್ಯಾರ್ಥಿಗೆ ಕಾಲಿಗೆ ಪೆಟ್ಟಾಗಿದ್ದರೆ, ಎರಡನೇ ತರಗತಿಯ ಮಗು ಘಟನೆಯಿಂದ ಆಘಾತಕ್ಕೆ ಒಳಗಾಗಿದೆ. ಉಳಿದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಸ್ಥಳದಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಇದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….