ದೊಡ್ಡಬಳ್ಳಾಪುರ, (ಜೂ.24): ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ವತಿಯಿಂದ ನಡೆಯಲಿರುವ ಪ್ರತಿಭಾ ಪುರಸ್ಕಾರಕ್ಕೆ ಜೂನ್ 30ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ತಿಳಿಸಿದ್ದಾರೆ.
2022-23ರ ಸಾಲಿನಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಸರ್ಕಾರಿ ಶಾಲೆ ಅಥವಾ ಕನ್ನಡ ಮಾಧ್ಯಮ ವ್ಯಾಸಂಗ ಮಾಡಿ 10ನೇ ತರಗತಿಯಲ್ಲಿ ಶೇ.90 ಅಥವಾ ಕನ್ನಡ ವಿಷಯದಲ್ಲಿ 125ಅಂಕ ಪಡೆದವರು, ಖಾಸಗಿ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡಿ ಶೇ 95 ಅಥವಾ ಕನ್ನಡ ವಿಷಯದಲ್ಲಿ 125 ಅಂಕಪಡೆದವರು, ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡಿ ಶೇ. 90 ಅಥವಾ ಕನ್ನಡ ವಿಷಯದಲ್ಲಿ ಶೇ 100 ಅಂಕ ಪಡೆದವರು, ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡಿ ಶೇ 95 ಅಥವಾ ಕನ್ನಡ ವಿಷಯದಲ್ಲಿ ಶೇ100ರಷ್ಟು ಅಂಕಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿಗಳೊಂದಿಗೆ ವಿದ್ಯಾರ್ಥಿ ಭಾವಚಿತ್ರ, ಶಾಲಾ, ಕಾಲೇಜಿನ ಗುರುತಿನ ಚೀಟಿ, ಅಂಕಪಟ್ಟಿ ಇರಬೇಕು. ಪ್ರತಿಭಾ ಪುರಸ್ಕಾರ ಜುಲೈ 9 ರಂದು ಕನ್ನಡ ಜಾಗೃತ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 8660602560, 9060302558, 7892408881.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….