ದೊಡ್ಡಬಳ್ಳಾಪುರ, (ಜೂ.26): ಚಿರುಋಣಿ ಕನ್ನಡಾಂಬೆ ಹೋರಾಟ ಸಮಿತಿ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್, ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರ ಅಭಿನಂದನ ಸಮಾರಂಭ ಜೂನ್ 25 ರಂದು ಬೆಳಿಗ್ಗೆ 10.30ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಮಿತಿಯ ಸಂಸ್ಥಾಪಕ ರವಿಮಾವಿನಕುಂಟೆ ತಿಳಿಸಿದ್ದಾರೆ.
ಸಮಾರಂಭವನ್ನು ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಚಿರುಋಣಿ ಕನ್ನಡಾಂಬೆ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಎಸ್.ಎನ್.ಸುಬ್ರಹ್ಮಣಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಭಾಗವಹಿಸಲಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….