ದೊಡ್ಡಬಳ್ಳಾಪುರ, (ಜೂ.25): ನಗರದ ಬೆಸೆಂಟ್ ಪಾರ್ಕ್ ರಸ್ತೆಯ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಳೆದ ವರ್ಷ ಅತ್ಯುತ್ತಮ ಅಂಕಗಳನ್ನು ಪಡೆದವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾಸಂಸ್ಥೆಯ ನಿರ್ದೇಶಕ ಡಾ:ಎಚ್.ಜಿ.ವಿಜಯಕುಮಾರ್, ವಿದ್ಯಾರ್ಥಿಗಳು ಬದುಕಲ್ಲಿ ಶಿಸ್ತು ಅಳವಡಿಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯವಿದೆ. ಇಂದಿನ ಜಾಗತಿಕ ಯುಗದಲ್ಲಿ ಪ್ರತಿಭೆಗೆ ಮನ್ನಣೆಯಿದ್ದು, ನಿರಂತರ ಪರಿಶ್ರಮ, ಏಕಾಗ್ರತೆಯಿಂದ ಅಧ್ಯಯನ ಮಾಡಿದಾಗ ಮಾತ್ರ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರೊಂದಿಗೆ ಅವರಿಗೆ ಉತ್ತೇಜನ ನೀಡಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಾದ ಚೇತನ್.ಜಿ. ತೇಜಸ್ವಿನಿ.ಎಲ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸುಧಾಕರ್, ಉಪಪ್ರಾಂಶುಪಾಲ ಎಂ.ಸಿ.ಮಂಜುನಾಥ್ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….