ದೊಡ್ಡಬಳ್ಳಾಪುರ, (ಜೂ.26): ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಸೋಮವಾರ ರಾತ್ರಿ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಘಟನೆಯಲ್ಲಿ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಅಪರಿಚಿತ ಪಾದಚಾರಿ ಸ್ಥಳದಲ್ಲಿಯೇ ಸಾವನಪ್ಪಿದ್ದು, ದ್ವಿಚಕ್ರ ವಾಹನದ ಮುಂಬದಿಯ ಸವಾರ ಕಲ್ಲುಕುಂಟೆ ಗ್ರಾಮದವರೆನ್ನಲಾಗುತ್ತಿರುವ ಯುವಕನಿಗೆ ಗಂಭೀರವಾಗಿ ಗಾಯಗೊಂಡಿದ್ದರೆ, ಸಹ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಇನ್ಸ್‌ಪೆಕ್ಟರ್ ವಿಜಯಲಕ್ಷ್ಮಿ ಹಾಗೂ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….