ದೊಡ್ಡಬಳ್ಳಾಪುರ, (ಜೂ.26): ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಆರು ತಿಂಗಳವರೆಗೆ ನೀರು ಪೂರೈಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಸೂಚಿಸಿದರು.
ಇಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕೆಳಗಿನನಾಯ್ಕರಂಡಹಳ್ಳಿ ಗ್ರಾಮದ ಶಾಲಾ ಕಟ್ಟಡ ಹಾಗೂ ರಂಗಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ, ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಅಂತರ್ಜಲ ಶುದ್ಧಿ ಆಗಬೇಕಾದರೆ ಆರು ತಿಂಗಳು ಬೇಕಾಗುತ್ತದೆ, ಅಷ್ಟರಲ್ಲಿ ಎಸ್‌ಟಿಪಿ ಪ್ಲಾಂಟ್, ಪೈಪ್‌ಲೈನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.
ಶನಿವಾರ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು ಅಷ್ಟರಲ್ಲಿ ತಾಲ್ಲೂಕಿನಲ್ಲಿ ಹದಗೆಟ್ಟ ರಸ್ತೆಗಳು ಮತ್ತು ತುರ್ತಾಗಿ ಮಾಡಲೇಬೇಕಾದ ರಸ್ತೆಗಳು, ತಾಲ್ಲೂಕಿನಲ್ಲಿ ದುರಸ್ತಿಗೆ ಬಂದಿರುವ ಶುದ್ದಕುಡಿಯುವ ನೀರಿನ ಘಟಕ, ಹೊಸದಾಗಿ ಆರಂಬಿಸಬೇಕಾದ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು ಎನ್ನಲಾಗಿದೆ.
ಸಭೆಯಲ್ಲಿ ತಹಶಿಲ್ದಾರ್ ಮೋಹನಕುಮಾರಿ, ತಾಪಂ ಇಒ ಶ್ರೀನಾಥ್‌ಗೌಡ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….