ನಾಡಪ್ರಭು ಕೆಂಪೇಗೌಡ ಜಯಂತಿ: ದೊಡ್ಡಬಳ್ಳಾಪುರದ ಮಾಜಿ ಶಾಸಕ ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರ ಕಡೆಗಣನೆಗೆ ತಾಪಂ ಮಾಜಿ ಅಧ್ಯಕ್ಷ ಆಕ್ರೋಶ..!!

ದೊಡ್ಡಬಳ್ಳಾಪುರ, (ಜೂ.26): ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ,ಕೆಂಪೇಗೌಡರ ಜಯಂತೋತ್ಸವ,ತಾಲ್ಲೂಕು ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮ ಜೂನ್ 27ರಂದು ನಗರದ ಒಕ್ಕಲಿಗರ ಭವನದಲ್ಲಿ ನಡೆಯಲಿದೆ.

ಜೂನ್ 27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಡೊಳ್ಳು ಕುಣಿತದೊಂದಿಗೆ ಕೆಂಪೇಗೌಡರ ಭಾವಚಿತ್ರ ಹಾಗೂ ಪುತ್ಥಳಿ ಹೊತ್ತ ಬೆಳ್ಳಿರಥ ಮೆರವಣಿಗೆ ಪ್ರಾರಂಭವಾಗಲಿದೆ. ತಾಲ್ಲೂಕು ಕಚೇರಿದಲ್ಲಿ ಸರ್ಕಾರಿ ಗೌರವಗಳೊಂದಿಗೆ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಒಕ್ಕಲಿಗರ ಭವನದವರೆಗೆ ಮೆರವಣಿಗೆ ನಡೆಯಲಿದೆ.

ಒಕ್ಕಲಿಗರ ಭವನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ, ತಾಲ್ಲೂಕಿನ ಪ್ರಗತಿ ಪರ ರೈತರು, ಕಲಾವಿದರ ಅಭಿನಂದನೆ ನಡೆಯಲಿದೆ. 

ಆದರೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದ ಬ್ಯಾನರ್‌ನಲ್ಲಿ ನಿಕಟಪೂರ್ವ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಒಕ್ಕಲಿಗ ಸಮುದಾಯದ‌ ಅನೇಕ ಮುಖಂಡರ ಭಾವಚಿತ್ರ ಮುದ್ರಿಸದೆ ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಒಕ್ಕಲಿಗ ಸಮುದಾಯದ ಮುಖಂಡರಿಗೆ ಅಗೌರವ ತೋರಿದ್ದಾರೆಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಪಕ್ಷಾತೀತವಾಗಿ ಆಚರಣೆಯಾಗಬೇಕಿದೆ. ಆದರೆ ಆಚರಣಾ ಸಮಿತಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ತಮ್ಮ ಸ್ವಾರ್ಥವೆಂಬಂತೆ ವೇದಿಕೆಯಲ್ಲಿ ಅಳವಡಿಸಲಾಗುತ್ತಿರುವ ಬ್ಯಾನರ್‌ನಲ್ಲಿ ಕಳೆದ 10 ವರ್ಷಗಳ ಕಾಲ ಶಾಸಕರಾಗಿ ತಾಲೂಕಿನ ಸೇವೆ ಸಲ್ಲಿಸಿದ ಟಿ.ವೆಂಕಟರಮಣಯ್ಯ ಸೇರಿದಂತೆ ತಾಲೂಕಿನ ಅನೇಕ ಒಕ್ಕಲಿಗ ಮುಖಂಡರನ್ನು ಕಡೆಗಣಿಸುವ ಮೂಲಕ ಸಮುದಾಯವನ್ನು ಅವಮಾನಿಸಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!