ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ: ಕುಮಾರಸ್ವಾಮಿ ಆಗ್ರಹ

ಬೆಂಗಳೂರು, (ಜೂ. 26): ಆಹಾರ ಪದಾರ್ಥಗಳ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿದ್ದರೂ ಅದಕ್ಕೆ ನಿಯಂತ್ರಣ ಹಾಕದ ರಾಜ್ಯ ಕಾಂಗ್ರೆಸ್ ಸರಕಾರ ಮೇಲೆ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ವರದಿಯನ್ನು ಉಲ್ಲೇಖಸಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ಐದು ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ ಎಂದಿರುವ ಅವರು, ‘ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ‘ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದ್ದಾರೆ.

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ ಎಂದು ಅವರು ದೂರಿದ್ದಾರೆ.

ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ ರೂ.20 ಏರಿದ್ದರೆ,ಕೆಜಿ ಟೊಮ್ಯಾಟೋ ಬೆಲೆ ರೂ.100 ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ, ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಪಕ್ಷವು, ತಾನು ಕೊಟ್ಟ ಭರವಸೆಗಳ ಬಗ್ಗೆ ಉತ್ತರ ಹೇಳಲಿ? ಬೆಲೆಗಳ ಇಳಿಕೆಯ ಬಗ್ಗೆ ಹೇಳಿದ್ದೆಲ್ಲ ಎಲ್ಲಿ ಹೋಯಿತು? ಮತ ಪಡೆದ ಮೇಲೆ ಎಲ್ಲಾ ಮರೆತು ಹೋಯಿತಾ? 135 ಸೀಟು ಸಿಕ್ಕಿದ ಮೇಲೆ ಪ್ರಣಾಳಿಕೆ ಪುಸ್ತಕಕ್ಕೆ ಮೂವತ್ತೇ ದಿನದಲ್ಲಿ ಗೆದ್ದಲು ಹಿಡಿಯಿತಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ? ಎಂದು ಅವರು ಸರಕಾರವನ್ನು ಕೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು ಹೀಗಿವೆ ಎಂದು ಟಾಂಗ್ ನೀಡಿರುವ ಅವರು ಸರಕಾರದ ಹೊಸ 5 ಗ್ಯಾರಂಟಿಗಳನ್ನು ಹೀಗೆ ಪಟ್ಟಿ ಮಾಡಿದ್ದಾರೆ.

1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು!

2.ಗೃಹಜ್ಯೋತಿ ಈಗ ಸುಡುಜ್ಯೋತಿ!!

3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!!

4.ಗೃಹಲಕ್ಷ್ಮಿಗೆ ಗ್ರಹಣ!!!!

5.ನಿದಿರೆಗೆ ಜಾರಿದೆ ಯುವನಿಧಿ!!!!

ಕಾಂಗ್ರೆಸ್ ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ ಎಂದು ಮಾಜಿ ಮುಖ್ಯಮಂತ್ರಿ ಅವರು ಈ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!